ಸಿದ್ದರಾಮಯ್ಯ, ಡಿಕೆಶಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಕಟೀಲ್
ಶಿವಮೊಗ್ಗ : ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್?? ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ನದ್ದೇ ಮೇಲುಗೈ ಎಂಬ ಸಿದ್ದರಾಮಯ್ಯ, ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇದರಿಂದ ಕಾಂಗ್ರೆಸಿಗರಿಗೆ ಇನ್ನೂ 10 ವರ್ಷ ಅಧಿಕಾರಕ್ಕೆ ಬರಲ್ಲ ಎಂಬ ಭಯ ಪ್ರಾರಂಭವಾಗಿದೆ. ಹೀಗಾಗಿ ಅವರು ಹತಾಶರಾಗಿ ಮಾತನಾಡಲು ಪ್ರಾರಂಭಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ವಿಶೇಷ ಸಭೆ ಮಾತನಾಡಿ, ಇಂದು ಮತ್ತು ನಾಳೆ ಬಿಜೆಪಿಯ ವಿಶೇಷ ಸಭೆ ಹಾಗೂ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಇದಕ್ಕೆ ರಾಜ್ಯ ಬಿಜೆಪಿಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ಮಂತ್ರಿಗಳು ಆಗಮಿಸಲಿದ್ದಾರೆ. ಜೊತೆಗೆ ನಮ್ಮ ರಾಜ್ಯದ ಸಿಎಂ ಯಡಿಯೂರಪ್ಪ ಆಗಮಿಸಲಿದ್ದಾರೆ.
ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಚಾರವಾಗಿ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು. ಹಾಗೇ ಕಳೆದ ಬಾರಿಯ ಸಭೆಯಲ್ಲಿ ಗೋಹತ್ಯೆ ನಿಷೇಧ ಹಾಗೂ ಲವ್ ಜಿಹಾದ್ ಬಗ್ಗೆ ಚರ್ಚೆ ನಡೆಸಲಾಗಿತ್ತು.
ಅದರಂತೆ ಕಳೆದ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗಿದೆ. ಮುಂದೆ ಲವ್ ಜಿಹಾದ್ ಜಾರಿಗೆ ತರಲಾಗುವುದು ಎಂದರು.
ಮಂತ್ರಿ ಮಂಡಲ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ, ಕಾಲ ಕಾಲಕ್ಕೆ ಅವೆಲ್ಲಾ ನಡೆಯುತ್ತವೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









