ಯುವ ಧೂಮಪಾನಿಗಳಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ ಸರ್ಕಾರ: ಏನಂತೀರಾ..!
ನವದೆಹಲಿ: ಧೂಮಪಾನಿಗಳನ್ನೇ ಪ್ರಮುಖ ಗುರಿ ಆಗಿಸಿಕೊಂಡಿರುವ ಕೇಂದ್ರ ಸರ್ಕಾರ ಹೊಸ ಬಿಲ್ ಜಾರಿಗೆ ತರಲು ನಿರ್ಧರಿಸುವ ಮೂಲಕ ಧೂಮಪಾನಿಗಳಿಗೆ ಬಿಗ್ ಶಾಕ್ ನೀಡಿದೆ. ಧೂಮಪಾನ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಹೊಸ ಮಸೂದೆಯೊಂದನ್ನು ಸಿದ್ಧಪಡಿಸಿದೆ.
ಭಾರತದ ಗಡಿಯಲ್ಲಿ ಚೀನಾದ ಮಿಲಿಟರಿ ಆಕ್ರಮಣ ವಿರೋಧಿ ಕಾಯ್ದೆಗೆ ಅಮೆರಿಕಾ ಸಂಸತ್ತಿನಲ್ಲಿ ಗ್ರೀನ್ ಸಿಗ್ನಲ್..!
ಹೌದು.. ಇತ್ತೀಚೆಗೆ ಕೃಷಿ ಮಸೂದೆಗಳನ್ನು ಕಾಯ್ದೆಗಳನ್ನಾಗಿಸಿ ಸಂಚಲನ ಮೂಡಿಸಿರುವ ಕೇಂದ್ರ ಸರ್ಕಾರ, ಇದೀಗ ಧೂಮಪಾನಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಕೈಹಾಕಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ತಡೆ ಮತ್ತು ವ್ಯಾಪಾರ, ವಾಣಿಜ್ಯ, ಉತ್ಪಾದನೆ, ಸರಬರಾಜು ಹಾಗೂ ವಿತರಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ, 2020ನ್ನ ಜಾರಿ ಮಾಡಲು ಹೊರಟಿದೆ.
ಇದು ‘ಬಿಜೆಪಿ ಲಸಿಕೆ’, ನಾನು ತೆಗೆದುಕೊಳ್ಳಲ್ಲ: ಅಖಿಲೇಶ್ ಯಾದವ್
ಹೌದು ಹೊಸ ತಿದ್ದುಪಡಿ ಪ್ರಕಾರ ಸಿಗರೇಟ್ ಸೇವನೆ/ಮಾರಾಟ ಸಂಬಂಧ ಇರುವ ವಯಸ್ಸಿನ ಮಿತಿ ಹೆಚ್ಚಾಗಲಿದೆ. ಅಂದರೆ ಈ ಹಿಂದೆ 18 ವರ್ಷದ ಒಳಗಿನವರಿಗೆ ಸಿಗರೇಟ್ ಮಾರಾಟ ಮಾಡುವುದು ಅಥವಾ ಅವರು ಧೂಮಪಾನ ಮಾಡುವುದಕ್ಕೆ ನಿರ್ಬಂಧವಿತ್ತು. ಈ ತಿದ್ದುಪಡಿ ಪ್ರಕಾರ ಅದು 21 ವರ್ಷಕ್ಕೆ ಹೆಚ್ಚಳವಾಗಲಿದ್ದು, ಮುಂದೆ 21 ವರ್ಷದ ಒಳಗಿನವರಿಗೆ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಥವಾ ಆ ವಯಸ್ಸಿನ ಒಳಗಿನವರು ಅದನ್ನು ಸೇವಿಸುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಇದನ್ನು ಉಲ್ಲಂಘಿಸಿದಲ್ಲಿ 2 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು. 2ನೇ ಸಲ ಉಲ್ಲಂಘಿಸಿದರೆ 5 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








