ಕೊರೊನಾ ಅಪ್ ಡೇಟ್ : ಕಳೆದ 24 ಗಂಟೇಲಿ 18,177 ಕೇಸ್ ಪತ್ತೆ, 217 ಸಾವು
ನವದೆಹಲಿ : ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಆತಂಕದ ಶುರುವಾಗಿದೆ.
ಈ ಮಧ್ಯೆ ಚೀನಿ ವೈರಸ್ ನ ಆರ್ಭಟ ತಗ್ಗಿದ್ದು, 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 18,177 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.03 ಕೋಟಿ ಗಡಿದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,177 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 1,03,23,965ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಮತ್ತೊಂದು ದೋಖಾ ಕಂಪನಿ : 100 ಕೋಟಿ ಗುಳುಂ
ಇದೇ ಅವಧಿಯಲ್ಲಿ 217 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾಗೆ ಬಲಿಯಾದ ಸೋಂಕಿತರ ಸಂಖ್ಯೆ 1,49,435ಕ್ಕೆ ಏರಿಕೆಯಾಗಿದೆ.
ಇನ್ನು ಒಟ್ಟು 1,03,23,965 ಕೊರೊನಾ ವೈರಸ್ ಸೋಂಕಿತರ ಪೈಕಿ ಈವರೆಗೂ 99,27,310 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿನೆ 20,923 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿನ್ನು 2,47,220 ಸಕ್ರಿಯ ಪ್ರಕರಣಗಳಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









