ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಬೆಂಗಳೂರು, ಜನವರಿ03: ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೈದ್ಯಕೀಯ ತಪಾಸಣೆ ಮೊತ್ತದ ಮರು ಪಾವತಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ.
ಸರ್ಕಾರಿ ನೌಕರರು 40 ವರ್ಷ ದಾಟಿದ ಬಳಿಕ ವರ್ಷಕ್ಕೆ ಒಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ಅದರ ಮೊತ್ತವನ್ನು ಮರುಪಾವತಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲು ನಿರ್ಧರಿಸಿದೆ.
ಇದಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಿ ನೌಕರರ ನಿಯಮ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.
ಈ ನಿಯಮದ ಪ್ರಕಾರ 40 ವರ್ಷ ದಾಟಿದ ಸರ್ಕಾರಿ ನೌಕರರು ವರ್ಷಕ್ಕೆ ಒಂದು ಸಲ ನಿಗದಿಪಡಿಸಿದ ವೈದ್ಯಕೀಯ ತಪಾಸಣೆಗೆ ಒಳಗಾಗಿ ಪಾವತಿಸಿದ ಹಣವನ್ನು ಮರುಪಾವತಿಸಿಕೊಳ್ಳಬಹುದಾಗಿದೆ. ಸರ್ಕಾರಿ ನೌಕರರು ವರ್ಷಕ್ಕೊಮ್ಮೆ ರಕ್ತದಲ್ಲಿರುವ ಸಕ್ಕರೆ ಅಂಶ, ಲಿವರ್ , ಕಿಡ್ನಿ, ಇಸಿಜಿ, ಥೈರಾಯ್ಡ್, ಹಿಮೋಗ್ಲೋಬಿನ್ ಇತ್ಯಾದಿ ತಪಾಸಣೆ ಮಾಡಿಸಿಕೊಳ್ಳಬಹುದಾಗಿದ್ದು, ಅದರ ಮೊತ್ತವನ್ನು ಮರುಪಾವತಿಸಿಕೊಳ್ಳುಬಹುದು ಎಂದು ಹೇಳಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಹಲ್ಲುನೋವಿಗೆ ಪರಿಣಾಮಕಾರಿ ಮನೆಮದ್ದುಗಳುhttps://t.co/HhYDoJETEb
— Saaksha TV (@SaakshaTv) December 31, 2020
ಜನವರಿ 1ರಿಂದ ಬದಲಾದ ರೈಲು ಟಿಕೆಟ್ ಕಾಯ್ದಿರಿಸುವ ವಿಧಾನ https://t.co/VytpPCKmxG
— Saaksha TV (@SaakshaTv) January 2, 2021