ಬೆಳಗಾವಿ: ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿು, ವಿದ್ಯುತ್ ಕಾಮಗಾರಿ, ಉದ್ಯಾನವನ ಅಭಿವೃದ್ಧಿ ಸೇರಿದಂತೆ ಗೋಕಾಕ್ ಕ್ಷೇತ್ರದಲ್ಲಿ 25 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಶಂಕು ಸ್ಥಾಪನೆ ನೆರವೇರಿಸಿದರು.

ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ 25 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು,ನೀರು ಸರಬರಾಜು ಕಾಮಗಾರಿಗಳು ಸೇರಿವೆ.
ಅಭಿನಂದನಾ ಕಾರ್ಯಕ್ರಮ
ಗೋಕಾಕ್ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಿಗೆ ನೂತನವಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರನ್ನು ಸಚಿವ ರಮೇಶ್ ಜಾರಕಿಹೊಳಿ ಸನ್ಮಾನಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭೇಟಿ
ಇದೇ ವೇಳೆ, ಬೆಳಗಾವಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಜಯಾ ಹಿರೇಮಠ ಅವರು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗುವ ಸಂದರ್ಭದಲ್ಲಿ ಈ ಭೇಟಿ ನಡೆದಿರುವುದು ತೀವ್ರ ಕುತೂಹಲ ಕೆರಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








