ಬೆಂಗಳೂರು: ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ರಾಜ್ಯ ಜೆಡಿಎಸ್‍ನಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. ಸಂಕ್ರಾಂತಿಯಿಂದ `ಸಂ-ಕ್ರಾಂತಿ’ ಮಾಡುವುದಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿರುವ ಬೆನ್ನಲ್ಲೇ, ಯುವ ಜನತಾ ದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಪಕ್ಷ ಸಂಘಟನೆ ಕಡೆ ಮುಖಮಾಡಿದ್ದಾರೆ.

ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯುವ ಜಾತ್ಯಾತೀತ ಜನತಾದಳ ಮತ್ತು ವಿದ್ಯಾರ್ಥಿ ಜಾತ್ಯಾತೀತ ಜನತಾ ದಳ ಮುಖಂಡರ ಸಭೆಯನ್ನು ಇಂದು ನಿಖಿಲ್ ಕುಮಾರಸ್ವಾಮಿ ಕರೆದಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯುವ ಜನತಾ ದಳ (ಜಾತ್ಯತೀತ) ಮತ್ತು ವಿದ್ಯಾರ್ಥಿ ಜನತಾ ದಳ (ಜಾತ್ಯತೀತ) ವಿಭಾಗದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕಾರ್ಯಕಾರಿ ಸಮಿತಿಗಳ ಸದಸ್ಯರ ಸಭೆಯನ್ನು ಇಂದು ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಆಯೋಜಿಸಲಾಗಿದೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು ಅನುಭವಿಸಿದ ಬಳಿಕ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿದ್ದರು. ಈ ಹಿನ್ನೆಲೆಯಲ್ಲಿ ನಿಖಿಲ್‍ಗೆ ಯುವ ಜನತಾ ದಳ ಅಧ್ಯಕ್ಷರನ್ನಾಗಿ ದೇವೇಗೌಡರು ನೇಮಕ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








