ಬೆಂಗಳೂರಿನ ಜನರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು, ಜನವರಿ04: ಬೆಂಗಳೂರಿನ ಜನರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇನ್ಮುಂದೆ ಮೆಜೆಸ್ಟಿಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 10-15 ರೂ. ನೀಡಿ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ.

ಇಂದಿನಿಂದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಲಭ್ಯವಿದ್ದು, 10-15 ರೂ. ನೀಡಿ ಪ್ರಯಾಣಿಸಬಹುದಾಗಿದೆ.
ಜನವರಿ 8ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡಿರುವ ಜೊತೆಗೆ ನಗರದಿಂದ ವಿಮಾನ ನಿಲ್ದಾಣಕ್ಕೆ ಓಡಾಡುವ ರೈಲುಗಳ ಸಂಖ್ಯೆಯನ್ನು ಸಹ ಹೆಚ್ಚಿಸಲಾಗಿದೆ. ರೈಲುಗಳ ಪ್ರಯಾಣ ದರವು 10-15 ರೂಪಾಯಿ ಆಗಿದೆ.

ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ಇಂದು ಮುಂಜಾನೆ 4.45 ಕ್ಕೆ ಸಂಚಾರ ಆರಂಭಿಸಿದ್ದು, ರಾತ್ರಿ 9 ಗಂಟೆಗೆ ಕೊನೆಯ ರೈಲು ಹೊರಡಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1345760948200513538?s=19
https://twitter.com/SaakshaTv/status/1345760563486289920?s=19








