ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ : ರಮೇಶ್ ಜಾರಕಿಹೊಳಿ
ಬೆಳಗಾವಿ : ಅತೀ ಶೀಘ್ರದಲ್ಲಿ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ ಮಾಡಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ ವಿಚಾರವಾಗಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದರು.
ಶ್ರೀಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಗೋಕಾಕ್ ಚಿಕ್ಕೋಡಿ ಜಿಲ್ಲೆ ರಚನೆಗೆ ನಿರ್ಧಾರ ಮಾಡಲಾಗಿತ್ತು.
ಆದ್ರೆ ಬೈಲಹೊಂಗಲದವರು ತಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಬೇಡಿಕೆ ಇಟ್ಟಿದ್ದರಿಂದ ಗೋಕಾಕ್ ಪ್ರತ್ಯೇಕ ಜಿಲ್ಲೆಯ ವಿಚಾರ ಅಷ್ಟಕ್ಕೆ ನಿಂತಿದೆ. ತಾಂತ್ರಿಕ ಕಾರಣದಿಂದಾಗಿ ಗೋಕಾಕ್ ಜಿಲ್ಲೆಯಾಗುವುದು ಬಾಕಿ ಇದೆ.
ಕಾಂಗ್ರೆಸ್ ನವ್ರಿಗೆ ದರ್ದು ಇತ್ತು ಸಿಎಂ ಮಾಡಿದ್ರು :`ಕೈ’ ವಿರುದ್ಧ ಹೆಚ್ ಡಿಕೆ ಕಿಡಿ
ನನಗೆ ಸುಳ್ಳು ಹೇಳೋದು ಬರೋದಿಲ್ಲ. ಬಳ್ಳಾರಿ ಜಿಲ್ಲೆ ವಿಭಜನೆಯಾಕಾಯ್ತು ಅಂತ ಎಲ್ಲರಿಗೂ ಗೊತ್ತಿರುವ ವಿಚಾರ. ಬಜೆಟ್ ಮುಗಿದ ಬಳಿಕ ನಿಯೋಗದ ಜೊತೆ ಹೋಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡೋಣ.
ಅತೀ ಶೀಘ್ರದಲ್ಲಿ ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡೋಣ ಎಂದು ರಮೇಶ್ ಜಾರಕಿಹೊಳಿ ಭರವಸೆ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel