ಮಂಗಳೂರು: ಸೆಂಟ್ ಅಲೋಸಿಯಸ್ ಕಾಲೇಜಿನಲ್ಲಿ ಬಿಬಿಎ ಪದವಿ ಮುಗಿಸಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ನಡೆದಿದೆ.

ನೆಲ್ಯಾಡಿ ನಿವಾಸಿ ವಿ.ಜೆ.ಜೋಸೆಫ್ ಎಂಬುವ ಪುತ್ರಿ ನವ್ಯಾ ಜೋಸೆಫ್ (22)ಆತ್ಮಹತ್ಯೆ ಮಾಡಿಕೊಂಡು ಯುವತಿ. ಮಂಗಳೂರಿನ ಸೆಂಟ್ ಅಲೋಸಿಯಸ್ ಕಾಲೇಜಿನಲ್ಲಿ ಬಿಬಿಎ ಪದವಿ ಮುಗಿಸಿದ್ದ ನವ್ಯಾ, ಬಳಿಕ ನವ್ಯಾ ಮನೆಯಲ್ಲೇ ಇದ್ದಳು. ಭಾನುವಾರ ರಾತ್ರಿ ಸುಮಾರು 10:30ರ ವೇಳೆಗೆ ತನ್ನ ಕೊಠಡಿಗೆ ತೆರಳಿದ್ದ ನವ್ಯಾ ಇಂದು ಬೆಳಿಗ್ಗೆ ಗಂಟೆಯಾದರೂ ಕೊಠಡಿಯಿಂದ ಹೊರಗೆ ಬರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಆಕೆಯ ಮೊಬೈಲ್ಗೆ ಕರೆ ಮಾಡಿದ್ದಾರೆ. ಆದರೆ, ಆಕೆ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ರೂಮಿನ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಮನೆಯಲ್ಲಿ ಪೋಷಕರು ಇದ್ದಾಗಲೇ ಆಕೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಕಿ ಹಚ್ಚಿಕೊಂಡಾಗಲೂ ಆಕೆಯ ಚೀರಾಟ ಪೋಷಕರಿಗೆ ಕೇಳಲಿಲ್ಲವೇ ಎಂಬ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲವಾದರೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








