ಕಲಬುರಗಿ: ಮುಂಬರುವ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ 100 ಹೆಚ್ಚು ರೌಡಿಗಳಿಗೆ ಕಲಬುರಗಿ ಪೊಲೀಸರು ಬೆಳ್ಳಂಬೆಳಿಗ್ಗೆ ಬಿಸಿ ಮುಟ್ಟಿಸಿದ್ದಾರೆ.
ಆರ್.ಜೆ ನಗರ, ಸ್ಟೇಷನ್ ಬಜಾರ್, ಬ್ರಹ್ಮಪುರ ಹಾಗೂ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 100ಕ್ಕೂ ಹೆಚ್ಚು ರೌಡಿಗಳನ್ನು ಕಲಬುರಗಿ ನಗರದ ಮಿನಿ ವಿಧಾನಸೌಧ ಹಿಂಬದಯ ಡಿವಿಷನ್ ಕಚೇರಿ ಹಿಂಭಾಗದ ಮೈದಾನದಲ್ಲಿ ಬರುವಂತೆ ಸೂಚಿಸಿದರು.
ಎಸಿಪಿ ಅನ್ಷುಕುಮಾರ್ ನೇತೃತ್ವದಲ್ಲಿ ಪ್ರತಿಯೊಬ್ಬ ರೌಡಿಗಳ ಹಿನ್ನೆಲೆ, ಅಪರಾಧ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಅಹಿತಕರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಖಡರ್ಕ್ ವಾರ್ನಿಂಗ್ ನೀಡಿದ್ದಾರೆ.
ಅಲ್ಲದೆ ಕೆಲ ರೌಡಿಗಳಿಗೆ ಬಸ್ಕಿ ಹೊಡೆಸಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಸದ್ಯದಲ್ಲಿಯೇ ಕಲಬುರಗಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರೇಡ್ ಮಾಡಿ ರೌಡಿಗಳಿಗೆ ಎಚ್ಚರಿಕೆ ನೀಡಿ ಕಳಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel