ಪಕ್ಷ ತಾಯಿ ಸಮಾನ, ಬಿಎಸ್ ವೈ ತಂದೆ ಸಮಾನ : ರೇಣುಕಾಚಾರ್ಯ
ಬೆಂಗಳೂರು : ಸಂಘಟನೆ ಮತ್ತು ಪಕ್ಷ ತಾಯಿ ಸಮಾನ. ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದಿರುವ ಯಡಿಯೂರಪ್ಪನವರು ತಂದೆಯ ಸಮಾನ ಎಂದು ಯತ್ನಾಳ್ ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು. ನಾನು ಕೇವಲ ಯಡಿಯೂರಪ್ಪನವರ ಪರವಾಗಿ ಮಾತನಾಡುವವನಲ್ಲ.
ಪಕ್ಷ ತಾಯಿ ಸಮಾನ. ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದಿರುವ ಯಡಿಯೂರಪ್ಪನವರು ತಂದೆಯ ಸಮಾನ. ಇಬ್ಬರನ್ನೂ ಗೌರವಿಸಬೇಕು ಇದು ನಮ್ಮ ಕರ್ತವ್ಯವೂ ಆಗಿದೆ ಎಂದು ಸಿಎಂ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರೋ ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ.
ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ ಎನ್ನೋ ಆರೋಪದ ಬಗ್ಗೆ ಮಾತನಾಡಿ, ಯಡಿಯೂರಪ್ಪನವರ ಮಕ್ಕಳು ಆಡಳಿತದಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ ಅನ್ನೋದು ಕೇವಲ ಊಹಾಪೋಹವಷ್ಟೆ.
ವಿಜಯೇಂದ್ರ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ವಿಜಯೇಂದ್ರ ಬನ್ನಿ ಎಂದು ಯಾರನ್ನಾದರೂ ಕರೆದಿದ್ದಾರೆಯೇ? ಇವರ ಸ್ವಾರ್ಥಕ್ಕಾಗಿ ಹೋಗಿ, ಈಗ ಆರೋಪ ಮಾಡುತ್ತಿದ್ದಾರೆ.
ರಾಷ್ಟ್ರೀಯ ಪಕ್ಷಗಳು ನಮ್ಮವರ ಕಾಲು ಹಿಡಿಯುತ್ತಿವೆ : ಕುಮಾರಸ್ವಾಮಿ
ಸ್ವಾರ್ಥಕ್ಕೋಸ್ಕರ ಯಾರು ಬೇಕಾದರೂ ಆರೋಪ ಮಾಡಬಹುದು. ಆದರೆ ಈ ಆರೋಪದಲ್ಲಿ ಹುರುಳಿಲ್ಲ, ಇದು ಒಳ್ಳೆಯ ಬೆಳವಣಿಗೆಯೂ ಅಲ್ಲ ಎಂದು ಆಕ್ರೋಶ ಹೊರಹಾಕಿದರು.
ಇನ್ನು ನಿನ್ನೆ ನಡೆದ ಮುಖ್ಯಮಂತ್ರಿಗಳ ಹಾಗೂ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ.
ಆ ವಿಚಾರದಲ್ಲಿ ಯತ್ನಾಳ್ ಬಗ್ಗೆ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತೋ ನೋಡೋಣ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel