ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

600 ಕೋಟಿ ವೆಚ್ಚದ ಐತಿಹಾಸಿಕ ನೂತನ ಅನುಭವ ಮಂಟಪಕ್ಕೆ ಸಿಎಂ ಬಿಎಸ್‍ವೈ ಶಂಕುಸ್ಥಾಪನೆ

Kariyappa N by Kariyappa N
January 6, 2021
in Newsbeat, Politics, Samagra karnataka, ರಾಜ್ಯ
bsy
Share on FacebookShare on TwitterShare on WhatsappShare on Telegram

ಬೀದರ್: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ 12ನೇ ಶತಮಾನತದಲ್ಲಿ ಕ್ರಾಂತಿಕಾರಿ ಬಸವಣ್ಣ ಹಾಗೂ ಅಲ್ಲಮ ಪ್ರಭು ಕಟ್ಟಿದ್ದ ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ನೂತನ ಅನುಭವ ಮಂಟಪ ತಲೆಎತ್ತಲಿದೆ. ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇದು ಪೂರ್ವಜನ್ಮದ ಪುಣ್ಯ ಕಾರ್ಯ ಎಂದು ತಿಳಿಸಿದರು.


ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ ಬಿಡುಗಡೆ ಮಾಡಿದ್ದು, ಇನ್ನು 100 ಕೋಟಿ ರೂಗಳನ್ನು ವಾರದೊಳಗೆ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಪೂರ್ಣವಾದ ಕೂಡಲೇ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಇತಿಹಾಸದಲ್ಲಿ ಇಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ ಎಂದ ಅವರು, ಸಾಧನೆ ಮಾತನಾಡಬೇಕು. ಮಾತಾಡುವುದು ಸಾಧನೆಯಾಗಬಾರದು ಎನ್ನುವುದು ತಮ್ಮ ಮನೋಭಾವವಾಗಿದೆ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಅಂತೆಯೇ ಎರಡು ವರ್ಷದೊಳಗೆ ಅನುಭವ ಮಂಟಪ ನಿರ್ಮಿಸಿ, ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

Related posts

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

September 10, 2026
ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

September 10, 2026


ಅವರು ಇವರು ಎನ್ನದೇ ಎಲ್ಲ ಸಮುದಾಯದ ಜನರು ಸೇರಿ ಚರ್ಚಿಸಿ ಚಿಂತನ ಮಂಥನ ನಡೆಸುತ್ತಿದ್ದ ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿಯಾಗಿದೆ ಎಂದರು. ಸಾಮಾಜಿಕ ಬದಲಾವಣೆ ತರುವಲ್ಲಿ ಅನುಭವ ಮಂಟಪದ ಪಾತ್ರವು ಅತೀ ಮಹತ್ವದ್ದಾಗಿದೆ. ಮನುಕುಲದ ಏಳ್ಗೆಗೆ ಇಡೀ ವಚನ ಸಾಹಿತ್ಯ ಮಾರ್ಗದರ್ಶಿಯಾಗಿದೆ ಎಂದರು. ಅಣ್ಣ ಬಸವಣ್ಣನವರು ಈ ಕಲ್ಯಾಣ ನಾಡಿನಿಂದ ಹೊರಹೊಮ್ಮಿದ ಈ ದೇಶ ಕಂಡ ಬಹುದೊಡ್ಡ ವಿಶ್ವಗುರು ಅನ್ನುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಗೋ.ರು.ಚ ಅವರಂತಹ ಇನ್ನೂ ಅನೇಕ ಹಿರಿಯ ಸಾಹಿತಿಗಳ ಸಲಹೆ ಪಡೆದು, ಈ ಭಾಗದ ಜನರ ಬೇಡಿಕೆಯಂತೆ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ, ಪ್ರತಿ ವರ್ಷ ಬಸವ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಇಂತಹ ಒಳ್ಳೆಯ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

mapplan
ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಅನುಭವ ಮಂಟಪದ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ನನ್ನ ಬದುಕು ಪಾವನವಾಯ್ತು ಎಂದು ಹೇಳಲು ಹೆಮ್ಮೆ ಅನಿಸುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಶು ಸಂಗೋಪನೆ, ಪ್ರಭು ಚವ್ಹಾಣ್ ಮಾತನಾಡಿ, ಈ ಶರಣ ಕಾಯಕ ಭೂಮಿಯಲ್ಲಿ 12ನೇ ಶತಮಾನದ ವೈಭವವನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಅನುಭವ ಮಂಟಪ ನಿರ್ಮಾಣಕ್ಕೆ ಯಡಿಯೂರಪ್ಪ ಚಾಲನೆ ನೀಡಿದ್ದು, ಬೀದರ್ ಮತ್ತು ರಾಜ್ಯದ ಐತಿಹಾಸಿದ ಪುಟಗಳಲ್ಲಿ ದಾಖಲಾಗುವಂತದ್ದಾಗಿದೆ ಎಂದರು.
ಶಾಸಕರಾದ ಈಶ್ವರ ಖಂಡ್ರೆ ಮಾತನಾಡಿ, ಇಂದು ಬಸವ ಅನುಯಾಯಿಗಳಿಗೆ ಸಂತಷದ ದಿನ. ಈ ಕಟ್ಟಡ ಬೇಗ ನಿರ್ಮಾಣವಾಗಬೇಕು. ಈ ಮೂಲಕ ಬಸವಕಲ್ಯಾಣದ ಕೀರ್ತಿ ವಿಶ್ವದೆಲ್ಲೆಡೆ ಹರಡಲಿ ಎಂದು ತಿಳಿಸಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 600 crore projectbasava kalyanaBasavannabidar district. 12th centuryBS Yeddyurappalaid stonenew anubhava mantapa
ShareTweetSendShare
Join us on:

Related Posts

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್

by Shwetha
September 10, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

by Shwetha
September 10, 2026
0

ರಾಜ್ಯ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳ ಪರಿಷ್ಕರಣೆ ನಡೆಸಿದ್ದು, ಇದೀಗ ಪಡಿತರ ಚೀಟಿಗಳ ಪರಿಷ್ಕರಣೆ ಪ್ರಕ್ರಿಯೆಯೂ ಚರ್ಚೆಗೆ ಬಂದಿದೆ. ಇದರ ಭಾಗವಾಗಿ ರೇಷನ್...

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

ತಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿ: ಆಸ್ತಿ ವಿವಾದದಲ್ಲಿ ಮಗನಿಗೆ ಸುಪ್ರೀಂ ಕೋರ್ಟ್ ಬುದ್ಧಿಮಾತು

by Shwetha
September 10, 2026
0

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹೆತ್ತ ತಂದೆ-ತಾಯಿಯನ್ನೇ ನ್ಯಾಯಾಲಯಕ್ಕೆ ಎಳೆದು ತಂದಿದ್ದ ಮಗನಿಗೆ ಸುಪ್ರೀಂ ಕೋರ್ಟ್ ತೀವ್ರವಾಗಿ ಬುದ್ಧಿಮಾತು ಹೇಳಿದೆ. ಕಾನೂನು ಹಕ್ಕುಗಳ ಜೊತೆಗೆ ಮಾನವೀಯ ಸಂಬಂಧಗಳಿಗೂ ಮಹತ್ವವಿದೆ...

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

by Shwetha
September 10, 2026
0

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ...

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 10, 2026
0

ಬೆಂಗಳೂರು: ಭಾರತದ ಇತಿಹಾಸದಲ್ಲಿ ಮೈಲಿಗಲ್ಲಾದ ಭಾರತ್ ಜೋಡೋ ಯಾತ್ರೆಯ ಐದನೇ ವರ್ಷಾಚರಣೆಯ ಸಂದರ್ಭದಲ್ಲಿ ಕೆಪಿಸಿಸಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರು ಕೇಂದ್ರದ ಬಿಜೆಪಿ ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram