ಟ್ರಂಪ್ ಬೆಂಬಲಿಗರ ದಾಂಧಲೆ : ಅಮೆರಿಕಾದ ಕರಾಳ ದಿನ ಎಂದ ಜೋ ಬೈಡನ್
ಅಮೆರಿಕಾ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗರು ಅಮೆರಿಕಾದ ಕ್ಯಾಪಿಟಲ್ ಬಿಲ್ಡಿಂಗ್ಗೆ ಮುತ್ತಿಗೆ ಹಾಕಿ ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ. ಹಿಂಸಾತ್ಮಕ ಘಟನೆಯಲ್ಲಿ ಮಹಿಳೆಯೂ ಸೇರಿದಂತೆ ನಾಲ್ವರು ಬಲಿಯಾಗಿದ್ದಾರೆ. ಈ ಘಟನೆಯನ್ನ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಇದು ಅಮೆರಿಕಾದ ಕರಾಳ ದಿನ ಎಂದು ಅವರು ಕರೆದಿದ್ದಾರೆ.
ಅಮೆರಿಕಾದಲ್ಲಿ ಹಿಂಸಾಚಾರಕ್ಕೆ ಕಾರಣ ಡೊನಾಲ್ಡ್ ಟ್ರಂಪ್: ಮಾಜಿ ಅಧ್ಯಕ್ಷ ಒಬಾಮ
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೋ ಬೈಡನ್, ಅಮೆರಿಕಾದ ಜನರಂತೆಯೇ ಇಡೀ ವಿಶ್ವವೇ ಇದನ್ನು ನೋಡುತ್ತಿದೆ. ಈ ಘಟನೆ ನನಗೆ ಶಾಕ್ ನೀಡಿದ್ದು, ಬೇಸರ ತಂದಿದೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಹಿಂದೆಂದೂ ಕಂಡಿರದ ದಾಳಿಯಾಗಿದೆ. ಪ್ರಜಾಪ್ರಭುತ್ವದ ಭರವಸೆಯ ಬೆಳಕಾಗಿದ್ದ ವ್ಯವಸ್ಥೆಯಲ್ಲಿ ಕತ್ತಲು ಆವರಿಸಿದೆ. ಯುದ್ಧ ಮತ್ತು ಕಲಹಗಳನ್ನು ಅಮೆರಿಕಾ ಹೆಚ್ಚು ಸಹಿಸಿಕೊಂಡಿದೆ. ನಾವು ಇದನ್ನೂ ಸಹಿಸಿಕೊಳ್ಳುತ್ತೇವೆ ಮತ್ತು ಮೇಲುಗೈ ಸಾಧಿಸುತ್ತೇವೆ ಎಂದಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಅಮೆರಿಕ ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿದ ಡೊನಾಲ್ಡ್ ಟ್ರಂಪ್ ಅವರ ಸಾವಿರಾರು ಬೆಂಬಲಿಗರು ಪೊಲೀಸರ ವಿರುದ್ಧ ಘರ್ಷಣೆಯಲ್ಲಿ ಭಾಗಿಯಾದರು. ಈ ಸುದ್ದಿ ಅಂತಾರಾಷ್ಚ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬಿಡನ್ ಪ್ರತಿಕ್ರಿಯೆ ನೀಡಿದ್ದು, ಅಮೆರಿಕ ಪ್ರಜಾಪ್ರಭುತ್ವದ ಮೇಲೆ ಹಿಂದೆಂದೂ ಕಂಡಿಲ್ಲದ ರೀತಿಯ ಹಲ್ಲೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel