ಕಾಂಗ್ರೆಸ್ ನಲ್ಲಿ ಸಿಎಂ ಆಗಲು ಬಹಳ ಜನ ಕ್ಯೂನಲ್ಲಿದ್ದಾರೆ : ಸತೀಶ್ ಜಾರಕಿಹೊಳಿ
ಬಾಗಲಕೋಟೆ : ಕಾಂಗ್ರೆಸ್ ನಲ್ಲಿ ಸಿಎಂ ಆಗಲು ಬಹಳ ಜನ ಕ್ಯೂನಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ನ ಮುಂದಿನ ಸಿಎಂ ಯಾರು ಎಂಬ ಗೊಂದಲದ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ಗೊಂದಲವಿದೆ.
ಸಿದ್ದರಾಮಯ್ಯ ಮುಂದಿನ ಸಿಎಂ ಆಗ್ತಾರೆ ಅಂತ ಹೇಳಿಲ್ಲ : ಆರ್.ಶಂಕರ್
ಎಲ್ಲರಿಗೂ ಮುಖ್ಯಮಂತ್ರಿ ಆಗೋ ಆಸೆ ಇರುತ್ತೆ. ಅದನ್ನ ಕೆಲವರು ಬಹಿರಂಗವಾಗಿ ಹೇಳಿಕೊಳ್ತಾರೆ, ಕೆಲವರು ಹೇಳಿಕೊಳ್ಳುವುದಿಲ್ಲ.
ಅದೇನು ದೊಡ್ಡ ಪ್ರಶ್ನೆಯೇ ಅಲ್ಲ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ, ಡಿಕೆಶಿ ಇಬ್ಬರಿದ್ದಾರೆ. ಅವರಿಬ್ಬರು ಮಾತ್ರವಲ್ಲ ಬಹಳ ಜನ ಕ್ಯೂನಲ್ಲಿದ್ದಾರೆ ಎಂದರು.
ಇದೇ ವೇಳೆ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಸೇರ್ಪಡೆ ಬಗ್ಗೆ ಮಾತನಾಡಿದ ಅವರು, ಇಬ್ರಾಹಿಂ ಅವರು ಪಕ್ಷದಲ್ಲಿ ಕೆಲವೊಂದು ವಿಚಾರಗಳನ್ನು ಸರಿಪಡಿಸಿಕೊಳ್ಳಲು ಸಲಹೆಗಳನ್ನ ನೀಡಿದ್ದಾರೆ.
ಅದರಲ್ಲಿ ಯಾವುದೇ ರೀತಿಯ ತಪ್ಪಿಲ್ಲ. ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳುವ ಜವಾಬ್ದಾರಿ ನಮ್ಮ ಪಕ್ಷಕ್ಕಿದೆ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









