‘ಭಾರತರತ್ನ’ ಪ್ರಶಸ್ತಿಗೆ ಸೋನಿಯಾ ಗಾಂಧಿ ಅರ್ಹರೇ : ನಿತೀಶ್ ಕುಮಾರ್..!
ಬಿಹಾರ: ಕಾಂಗ್ರೆಸ್ ಅಧ್ಯಕ್ಷೆ ಮತ್ತು ಸಂಸದೆ ಸೋನಿಯಾ ಗಾಂಧಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಬೇಕು ಎಂದು ಸದ್ಯ ಕಾಂಗ್ರೆಸ್ ನಾಯಕರು ಒತ್ತಾಯ ಮಾಡ್ತಿದ್ದಾರೆ. ಆದ್ರೆ ಈ ಪ್ರಸ್ತಾವನೆಗೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರು ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಮಾತನಾಡಿರೋ ನಿತೀಶ್ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಮಂತ್ರಿ ಎರಡು ಅವಧಿಗಳನ್ನು ಪೂರೈಸಿದರು.. ಆಗ ಕಾಂಗ್ರೆಸ್ ಪಕ್ಷ ಈ ಕೆಲಸವನ್ನು ತನ್ನ 10 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿಕೊಳ್ಳಬಹುದಿತ್ತು ಈಗ ಈ ಪ್ರಸ್ತಾವನೆಯ ಅವಶ್ಯಕತೆಯಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಅಲ್ಲದೇ ಪ್ರಶಸ್ತಿಗಾಗಿ ಬೇಡಿಕೆ ಇಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಗೌರವ ಸ್ವೀಕರಿಸುವ ಅರ್ಹತೆ ಆ ವ್ಯಕ್ತಿಯಲ್ಲಿದೆಯೇ ಎಂದು ತಿಳಿದುಕೊಳ್ಳುವುದು ಉತ್ತಮ. ಈ ಬಗ್ಗೆ ಉತ್ತರಕಾಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಸಲಹೆ ಕೇಳಿದಾಗ ಸೋನಿಯಾ ಜತೆಯಲ್ಲಿ ಬಿಎಸ್ಪಿ ವರಿಷ್ಠೆ ಮಾಯಾವತಿಯವರಿಗೂ ಭಾರತರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದಿದ್ದಾರೆ. ಈ ವಿಷಯವನ್ನು ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಯಾಕೆ ಎತ್ತಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಅಮೆರಿಕಾ ಗಲಭೆ ವೇಳೆ ಭಾರತದ ತಿರಂಗ..! : vedio viral
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








