ಇದ್ದಕ್ಕಿದ್ದಂತೆ ಸಾಯುತ್ತಿವೆ ಪಕ್ಷಿಗಳು : ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ..?
ಚಿಕ್ಕಬಳ್ಳಾಪುರ : ದೇಶದಲ್ಲಿ ಈಗಾಗಲೇ ಹಲವರು ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು ಸಾವಿರಾರು ಪಕ್ಷಗಳು ಸಾವನ್ನಪ್ಪಿವೆ.
ಇದೀಗ ಚಿಕ್ಕಬಳ್ಳಾಪುರದಲ್ಲಿಯೂ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಚಿಕ್ಕಬಳ್ಳಾಪುರ ನಗರ ಹೊರವಲಯದ ಜಿಲ್ಲಾಡಳಿತ ಭವನದ ಎದುರಿನ ಕೆರೆಯಂಗಳದಲ್ಲಿ ಪಕ್ಷಗಳು ಇದ್ದಕ್ಕಿದ್ದಂತೆ ಸಾಯುತ್ತಿವೆ.
ಹಾಸನದಲ್ಲಿ ಮತ್ತೆ ಕಾಡಾನೆಗಳ ಉಪಟಳ : ಜನರಲ್ಲಿ ಆತಂಕ
ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಅಮಾನಿ ಗೋಪಾಲಕೃಷ್ಣ ಕೆರೆಯಂಗಳಕ್ಕೆ ದೇಶದ ನಾನಾ ಮೂಲೆಗಳಿಂದ ಪಕ್ಷಿಗಳು ವಲಸೆ ಬಂದಿದ್ದು, ಇದೀಗ ಕೆಲ ಪಕ್ಷಿಗಳು ಸಾವನ್ನಪ್ಪಿವೆ. ಇನ್ನೂ ಕೆಲ ಪಕ್ಷಿಗಳು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಈ ವಿಚಾರವನ್ನು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಪಶು ವೈದ್ಯರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪಕ್ಷಿಗಳ ಗಂಟಲು ದ್ರವದ ಮಾದರಿಗಳನ್ನು ಲ್ಯಾಬ್ ಗೆ ಕಳುಹಿಸಿಕೊಟ್ಟಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









