ಮಡಿಕೇರಿ: ಕೊಡಗಿನಲ್ಲಿ ಕೊಡವರು ಗೋಮಾಂಸ ಭಕ್ಷಣೆ ಮಾಡುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಮತ್ತು ಕೊಡವ ಸಮಾಜ ಪ್ರತಿಭಟನೆ ನಡೆಸಿತ್ತು. ಸಿದ್ದು ಹೇಳಿಕೆ ವಿರುದ್ಧ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾದ ನಂತರ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಈ ದೂರಿನ ಅನ್ವಯ ಮಡಿಕೇರಿ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.


ಕೊಡಗು ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಮತ್ತು ವಿವಿಧ ಕೊಡವ ಸಮಾಜದ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ನಂತರ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಡಿಸೆಂಬರ್ 21ರಂದು ದೂರು ನೀಡಿದ್ದರು. ಇದೀಗ ಸಿದ್ದರಾಮಯ್ಯ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲು ಮಾಡಿದ್ದಾರೆ.
ಕಳೆದ ಡಿಸೆಂಬರ್ 16ರಂದು ಮೈಸೂರಿನಲ್ಲಿ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ವೇಳೆ ಸಿದ್ದರಾಮಯ್ಯ ಗೋಮಾಂಸ ಸೇವನೆ ಬಗ್ಗೆ ಪ್ರಸ್ತಾಪಿಸಿದ್ದರು. ಸಿದ್ದರಾಮಯ್ಯ ಹೇಳಿಕೆ ಕೊಡವರ ಬಗ್ಗೆ ಮಾಡಿದ ಘೋರ ಅಪಮಾನ. ಕೊಡವರು ಗೋವನ್ನು ದೇವರೆಂದು ಭಾವಿಸುತ್ತಾರೆ, ಕೊಡವರು ಗೋಮಾಂಸ ಸೇವನೆ ಮಾಡುವುದು ನನಗೆ ಗೊತ್ತಿಲ್ಲ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದಂತಿದೆ ಎಂದು ದೂರುದಾರ ರವಿ ಕುಶಾಲಪ್ಪ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವರ ಭಾವನೆಗೆ ಧಕ್ಕೆಯಾಗಿದೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೆವು. ಆದರೆ, ಪೊಲೀಸರು ಒತ್ತಡಕ್ಕೆ ಮಣಿದು ಪ್ರಬಲ ಸೆಕ್ಷನ್ ಅಡಿ ಎಫ್‍ಐಆರ್ ದಾಖಲಿಸಿಲ್ಲ. ಸಿದ್ದರಾಮಯ್ಯ ಕ್ಷಮೆ ಕೇಳಿದರೂ ಸುಮ್ಮನಾಗಲ್ಲ. ಕಾನೂನು ಹೋರಾಟ ಮಾಡೇ ಮಾಡುತ್ತೇವೆ ಎಂದು ರವಿ ಕುಶಾಲಪ್ಪ ಎಚ್ಚರಿಕೆ ನೀಡಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಆದರೆ, ಸಿದ್ದರಾಮಯ್ಯ ಹಂದಿ ಮಾಂಸ ಎಂದು ಹೇಳಲು ಹೋಗಿ ದನದ ಮಾಂಸ ಎಂದು ಹೇಳಿದ್ದಾರೆ. ಇದು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ ಎಂದು ಕಾಂಗ್ರೆಸ್ ಸಮರ್ಥನೆ ನೀಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








