ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರ್.ಎಸ್.ಎಸ್ ನವರ ಮುಲಾಜಿಗೆ ಒಳಗಾಗಿ ಅನುಭವ ಮಂಟಪ ಸ್ಥಾಪನೆ ಮೂಲಕ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ. ಅನುಭವ ಮಂಟಪ ಬಸವ ತತ್ವವನ್ನು ಸಾರುವಂತಿರಬೇಕೇ ಹೊರತು, ಬಸವಣ್ಣನವರೇ ವಿರೋಧಿಸಿದ ಸನಾತನ ಚಿಂತನೆಗಳನ್ನಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಎಸ್‍ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಸವಣ್ಣನವರ ಚಿಂತನೆಗಳ ಮರುಸ್ಥಾಪನೆಗಾಗಿ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಮಾಡಬೇಕೆಂದು ಗೊ.ರು ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದ್ದು, ಅನುಭವ ಮಂಟಪ ನಿರ್ಮಾಣಕ್ಕೆ ಮುನ್ನುಡಿ ಬರೆದದ್ದು ನಮ್ಮ ಸರ್ಕಾರ. ಆದರೆ ಈಗ ಯಡಿಯೂರಪ್ಪ ಅವರು ನಿರ್ಮಾಣ ಮಾಡಲು ಹೊರಟಿರುವ ಅನುಭವ ಮಂಟಪ ಬಸವ ತತ್ವಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.

ಸನಾತನ ಧರ್ಮದಲ್ಲಿದ್ದ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ತಾರತಮ್ಯ ಮುಂತಾದ ಅನಿಷ್ಟ ಪದ್ಧತಿಗಳ ವಿರುದ್ಧ ಸಿಡಿದೆದ್ದು ಅನುಭವ ಮಂಟಪ ಸ್ಥಾಪಿಸಿ, ಅಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಅಳವಡಿಸಿ, ಮನುಕುಲಕ್ಕೆ ಸಮಾನತೆಯನ್ನು ಸಾರಿದವರು ಜಗಜ್ಯೋತಿ ಬಸವೇಶ್ವರರು.

ಬಿಜೆಪಿಯವರ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಹಿಂದಿನ ಉದ್ದೇಶ ಸಂವಿಧಾನ ಬದಲಾವಣೆ ಮತ್ತು ವರ್ಣವ್ಯವಸ್ಥೆಯ ಮರುಸ್ಥಾಪನೆಯಾಗಿದೆ. ಸಮಾಜದಲ್ಲಿ ತಾರತಮ್ಯ ಜೀವಂತವಾಗಿದ್ದರೆ ಮತಧ್ರುವೀಕರಣ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದನ್ನು ಜನ ಅರ್ಥಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಸಾಕ್ಷರತೆಯ ಪ್ರಮಾಣ ಶೇ.15 ಇತ್ತು, ಈಗ ಶೇ.76ಕ್ಕೆ ತಲುಪಿದೆ. ಇಂದು ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬದಲಾವಣೆಗಳಾಗಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣವೇ ಹೊರತು ಬಿಜೆಪಿಯವರಲ್ಲ. ಸಾಧನೆಯ ಅರ್ಥವೇ ಗೊತ್ತಿಲ್ಲದವರು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಅಂತ ಪ್ರಶ್ನೆ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








