ಕೊಪ್ಪಳ: ಬಹುನಿರೀಕ್ಷಿತ ಭಾರತದ ದೇಶದ ಮೊದಲ ಆಟಿಕೆಗಳ ಕ್ಲಸ್ಟರ್ ಗೆ ಕೊಪ್ಪಳದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸು ಆತ್ಮನಿರ್ಭರ ಅಭಿಯಾನದಡಿ ಭಾರತದಲ್ಲಿ ಆರಂಭವಾಗುತ್ತಿರುವ ಮೊದಲ ಆಟಿಕೆಗಳ ಉತ್ಪಾದನಾ ಕ್ಲಷ್ಟರ್ ಇದಾಗಿದೆ.

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಾನಾಪುರದಲ್ಲಿ ಏಕಾಸ್ ಕಂಪನಿ ಹಾಗೂ ವಿಜಯೇಂದ್ರ ಬಾಬು ಮಾಲೀಕತ್ವದ ಮೈಕ್ರೋ ಪ್ಲಾಸ್ಟಿಕ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ 400 ಎಕರೆ ಪ್ರದೇಶದಲ್ಲಿ 5000 ಕೋಟಿ ವೆಚ್ಚದಲ್ಲಿ ಆಟಿಕೆಗಳ ಉತ್ಪಾದನಾ ಘಟಕ ಆರಂಭವಾಗಲಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗೊಂಬೆಗಳ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸಿದರು. ಸಿಎಂ ಯಡಿಯೂರಪ್ಪ ಅವರಿಗೆ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ ಪಾಟೀಲ್, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಸಂಸದ ಕರಡಿ ಸಂಗಣ್ಣ ಸೇರಿದಂತೆ ಹಲವು ಮುಖಂಡರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಾಥ್ ನೀಡಿದರು.

ಆಟಿಕೆಗಳ ಕ್ಲಸ್ಟರ್ ನಿಂದ ಉತ್ತರ ಕರ್ನಾಟಕ ಭಾಗದಲ್ಲಿ 40 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಆಟಿಕೆಗಳ ಉತ್ಪಾದನಾ ಘಟಕ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಮೀಪವಿದೆ. ಇದರಿಂದ ಕುಶಲ ಕರ್ಮಿಗಳಿಗೆ ವಿಪುಲ ಉದ್ಯೋಗಾವಕಾಶ ಕಲ್ಪಿಸುವುದರಿಂದ ನೇರ ಹಾಗೂ ಪರೋಕ್ಷವಾಗಿ 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ. ಆಟಿಕೆಗಳ ಉತ್ಪಾದನೆಯಲ್ಲಿ ಚೀನಾದ ಅವಲಂಬನೆ ಕಡಿಮೆ ಮಾಡಿ ಭಾರತವನ್ನು ಅದರಲ್ಲೂ ಕರ್ನಾಟಕವನ್ನು ಆಟಿಕೆಗಳ ಉತ್ಪದನಾ ಕೇಂದ್ರವಾಗಿಸುವುದು ಕ್ಲಸ್ಟರ್ ನ ಉದ್ದೇಶವಾಗಿದೆ.

ರಾಜ್ಯದ ಆಂತರಿಕ ಉತ್ಪನ್ನದ ಪಾಲು ಹೆಚ್ಚಿಸುವುದು, ಕರ್ನಾಟಕಕ್ಕೆ 700 ದಶಲಕ್ಷ ಡಾಲರ್ ಹೂಡಿಕೆ ಆಕರ್ಷಣೆ ಮಾಡುವುದು ಆಟಿಕೆಗಳ ಕ್ಲಷ್ಟರ್ ಆರಂಭದ ಮೂಲ ಉದ್ದೇಶವಾಗಿದೆ. ಮಕ್ಕಳ ಆಟಿಕೆ ಉತ್ಪಾದನಾ ಕ್ಷೇತ್ರದಲ್ಲಿ ಕೊಪ್ಪಳ ಶೇ.18ರಷ್ಟು ಪಾಲು ನೀಡುವ ಮೂಲಕ 2023ರ ವೇಳೆಗೆ 2300 ಕೋಟಿ ಮಾರುಕಟ್ಟೆ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುವ ಸಾಧ್ಯತೆ ಇದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕೊಪ್ಪಳದ ಆಟಿಕೆಗಳ ವಿಶೇಷ ಆರ್ಥಿಕ ವಲಯದಲ್ಲಿ ವಿಜಯೇಂದ್ರ ಬಾಬು ಮಾಲೀಕತ್ವದ ಮೈಕ್ರೋ ಪ್ಲಾಸ್ಟಿಕ್ ಪ್ರೈವೇಟ್ ಲಿಮಿಟೆಡ್ ಕಂಪನಿ ಕೂಡ ಪ್ರಮುಖ ಪಾತ್ರ ವಹಿಸಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








