ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆ, ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಉಪಚುನಾವಣೆ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಬಿಜೆಪಿ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಕ್ರಾಂತಿ ಬಳಿಕ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಳಗಾವಿಯಲ್ಲಿ ಜ.17ರಂದು ಬಿಜೆಪಿ ವತಿಯಿಂದ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ವಕ್ತಾರ ರವಿಕುಮಾರ್ ಹಾಗೂ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ಜನವರಿ 11ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗೋಪೂಜೆ ಮತ್ತು ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಜನಸೇವಕ ಸಮಾವೇಶದ ಉದ್ಘಾಟನೆ ನಡೆಯಲಿದೆ. ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ಗಳಲ್ಲೂ ಬಿಜೆಪಿ ಅಧಿಕಾರ ಪಡೆಯುವ ದೃಷ್ಟಿಯಿಂದ ಮಹತ್ವದ ಹೆಜ್ಜೆ ಇದಾಗಿದೆ ಎಂದು ರವಿಕುಮಾರ್ ವಿವರ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಸಂಸದರು, ಶಾಸಕರು, ಹಿರಿಯ ನಾಯಕರನ್ನೊಳಗೊಂಡ 5 ತಂಡಗಳು ರಾಜ್ಯದಾದ್ಯಂತ ಜನವರಿ 11ರಿಂದ 13ರವರೆಗೆ ಜನಸೇವಕ ಸಮಾವೇ± ನಡೆಸಲಿವೆ. ಪ್ರತಿದಿನ 10 ಜಿಲ್ಲೆಗಳಲ್ಲಿ ಸಮಾವೇಶ ನಡೆಯಲಿದ್ದು, ಪಕ್ಷದ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ 13ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷರಾದ ನಳಿನ್ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಪ್ರತಿಯೊಂದು ಜನಸೇವಕ ಸಮಾವೇಶದಲ್ಲಿ ಒಂದು ಸಾವಿರದಿಂದ ಮೂರು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಈ ಮೂಲಕ ಪಕ್ಷದ ಸಂಘಟನೆ, ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ತಯಾರಿ ನಡೆಯಲಿದೆ ಎಂದರು.
ಬಿಜೆಪಿ ಬಗ್ಗೆ ನಗರ ಕೇಂದ್ರಿತ ಹಾಗೂ ಪಟ್ಟಣ ಕೇಂದ್ರಿತ ಪಕ್ಷ ಎಂಬ ಕಾಂಗ್ರೆಸ್ ಮತ್ತು ಜೆಡಿಎಸ್ ಟೀಕೆಗೆ ಈ ಬಾರಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜನತೆ ಸಮರ್ಪಕ ಉತ್ತರ ನೀಡಿದ್ದಾರೆ. ಜೆಡಿಎಸ್- ಕಾಂಗ್ರೆಸ್ ಸೇರಿದರೆ ಗೆದ್ದ ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಸರ್ವಸ್ಪರ್ಶಿ ಸರ್ವವ್ಯಾಪಿ ಪಕ್ಷವಾಗಿ ಹೊರಹೊಮ್ಮಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸದನ ಸಮಿತಿ ಏಕಪಕ್ಷೀಯ
ವಿಧಾನಪರಿಷತ್ನಲ್ಲಿ ಸಭಾಪತಿ ಸ್ಥಾನ ಕುರಿತಂತೆ ನಡೆದ ಗಲಾಟೆ ಕುರಿತು ಪರಿಶೀಲಿಸಲು ಸದನ ಸಮಿತಿಯನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ರಚಿಸಿದ ಸದನ ಸಮಿತಿ ಏಕಪಕ್ಷೀಯವಾಗಿದೆ. ಸದನ ನಡೆಯುವಾಗ ಎಲ್ಲ ಪಕ್ಷದವರ ನಾಯಕರ ಅಭಿಪ್ರಾಯ ಪಡೆದು ಸಹಮತದಿಂದ ಸಮಿತಿ ರಚಿಸಬೇಕಿತ್ತು. ಬಿಜೆಪಿ ಸದಸ್ಯರಾದ ಎಚ್.ವಿಶ್ವನಾಥ್ ಮತ್ತು ಸಂಕನೂರು ಅವರು ಈ ಸಮಿತಿಗೆ ರಾಜೀನಾಮೆ ಕೊಟ್ಟಿದ್ದಾರೆ. ಸದನ ಸಮಿತಿಯ ಅಧ್ಯಕ್ಷರಾಗಿರುವ ಮರಿತಿಬ್ಬೇಗೌಡರು ಜೆಡಿಎಸ್ನಲ್ಲಿ ಇದ್ದಾರೋ ಕಾಂಗ್ರೆಸ್ನಲ್ಲಿದ್ದಾರೋ ಗೊತ್ತಿಲ್ಲ. ನಿಯಮಾವಳಿ ಉಲ್ಲಂಘಿಸಿ ರಚಿಸಲಾದ ಸದನ ಸಮಿತಿಯನ್ನು ಬಿಜೆಪಿ ವಿರೋಧಿಸುತ್ತದೆ ಎಂದು ರವಿಕುಮಾರ್ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








