ಬೆಂಗಳೂರು: ಹೈಕಮಾಂಡ್ ಬುಲಾವ್ ಮೇರೆಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿ ತಲುಪಿದ್ದಾರೆ. ಸಿಎಂ ಯಡಿಯೂರಪ್ಪ ಜತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಪುತ್ರ ವಿಜಯೇಂದ್ರ ಕೂಡ ತೆರಳಿರುವುದು ಕುತೂಹಲ ಕೆರಳಿಸಿದೆ.
ಬೆಳಿಗ್ಗೆಯೇ ಬೆಂಗಳೂರಿನಿಂದ ಹೊರಟ ಸಿಎಂ ಬಿಎಸ್‍ವೈ, ದಿಲ್ಲಿ ತಲುಪುತ್ತಿದ್ದಂತೆ ಕರ್ನಾಟಕ ಭವನಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಯಡಿಯೂರಪ್ಪ ಭೇಟಿ ಮಾಡುವ ಸಾಧ್ಯತೆ ಇದೆ. ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಗೆ ಬರುತ್ತಿದ್ದಂತೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬೆಳಗಾವಿ ಲೋಕಸಭೆ ಉಪಚುನಾವಣೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗಳಿಗೆ ಅಭ್ಯರ್ಥಿ ಆಯ್ಕೆ ಕುರಿತಂತೆ ಅಮಿತ್ ಶಾ ಜತೆ ಚರ್ಚೆ ನಡೆಸುವುದಾಗಿ ತಿಳಸಿದ್ದಾರೆ.
ಸಂಪುಟ ವಿಸ್ತರಣೆಯೋ, ಪುನಾರಚನೆಯೋ..?
ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ಎಂದ ಕೂಡಲೇ ಕುತೂಹಲ ಮೂಡಿಸುವುದು ಸಂಪುಟ ವಿಸ್ತರಣೆ. ಅದರಲ್ಲೂ ಈ ಬಾರಿ ಅಮಿತ್ ಶಾ ಸೂಚನೆ ಮೇರೆಗೆ ದೆಹಲಿಗೆ ಬಂದಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮಾಡುವುದಾದರೆ ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಪುನಾರಚನೆ ಮಾಡುವುದಾದರೆ ಯಾರನ್ನು ಸಂಪುಟದಿಂದ ಕೈಬಿಡಬೇಕು ಎಂಬುದರ ಬಗ್ಗೆ ತಮ್ಮ ಬಳಿ ಇರುವ ಪಟ್ಟಿಯೊಂದಿಗೆ ಅಮಿತ್ ಶಾ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಡಿನೋಟಿಫಿಕೇಶನ್ ಪ್ರಕರಣದ ತನಿಖೆಗೆ ಹೈಕೋರ್ಟ್ ಆದೇಶ ನೀಡಿರುವುದು ಹಾಗೂ ದಂಢ ವಿಧಿಸಿರುವ ಬಗ್ಗೆಯೂ ಅಮಿತ್ ಶಾ ಯಡಿಯೂರಪ್ಪ ಅವರಿಮದ ವಿವರಣೆ ಪಡೆಯಲಿದ್ದಾರೆ ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








