ದೆಹಲಿ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಜನತೆಗೆ ಉಚಿತ ಕೋವಿಡ್ ಲಸಿಕೆ ಘೋಷಿಸಿದ ದೀದಿ..!
ಕೋಲ್ಕತ್ತಾ: ಇತ್ತೀಚೆಗಷ್ಟೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಡೀ ರಾಜ್ಯದ ಎಲ್ಲಾ ಜನತೆಗೆ ಉಚಿತ ಕೊರೊನಾ ಲಸಿಕೆ ರಾಜ್ಯದ ಜನತೆಗೆ ಕೋವಿಡ್ ಲಸಿಕೆ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳದಲ್ಲೂ ರಾಜ್ಯದ ಜನರಿಗೆ ಸಿಎಂ ಮಮತಾ ಬ್ಯಾನರ್ಜಿ ಉಚಿತ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಬಾಯ್ಸ್ ಕೂಡ ಸೇಫ್ ಅಲ್ಲ…! ಯುವಕನ ಮೇಲೆ ಗ್ಯಾಂಗ್ ಗ್ಯಾಂಗ್ ರೇಪ್..!
ಈ ಬಗ್ಗೆ ಪ್ರತಿಕ್ರಿಯಿಸಿರುವ ದೀದಿ ಟಿಎಂಸಿ ಸರ್ಕಾರವು ರಾಜ್ಯದ ಎಲ್ಲಾ ಜನರಿಗೆ ಯಾವುದೇ ಶುಲ್ಕವಿಲ್ಲದೆ ಕೋವಿಡ್ ಲಸಿಕೆ ನೀಡಲು ವ್ಯವಸ್ಥೆ ಮಾಡುತ್ತಿದೆ. ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತಿರುವುದರ ಬಗ್ಗೆ ನಮಗೆ ಸಂತೋಷವಾಗಿದೆ ಎಂದಿದ್ದಾರೆ.
ಇನ್ನೂ ಕೋವಿಡ್ ಲಸಿಕೆಯನ್ನ ಆರಂಭಿಕ ಹಂತದಲ್ಲಿ ಜ.14ರೊಳಗೆ ಆರೋಗ್ಯ ಕಾರ್ಯಕರ್ತರಿಗೆ ನೀಡುವ ಸಾಧ್ಯತೆಯಿದೆ. ಸರ್ಕಾರ ಈಗಾಗಲೇ ಆರೋಗ್ಯ ಕಾರ್ಯಕರ್ತರ ಪಟ್ಟಿಯನ್ನು ಒದಗಿಸಿದ್ದು, ಆರೋಗ್ಯಕಾರ್ಯಕರ್ತರಲ್ಲಿ ಆಸ್ಪತ್ರೆಗಳ ದಾದಿಯರು, ವೈದ್ಯರು ಮತ್ತು ಗ್ರೂಪ್-ಡಿ ಸಿಬ್ಬಂದಿ ಸೇರಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








