ನವದೆಹಲಿ: ಹೈಕಮಾಂಡ್ ನಾಯಕರ ಭೇಟಿ ಬಳಿಕ ಮೌನಕ್ಕೆ ಶರಣಾಗಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ದಿಲ್ಲಿಯಿಂದಲೇ ಶುಭ ಸುದ್ದಿ ಬರಲಿದೆ, ಹೈಕಮಾಂಡ್ ಭೇಟಿ ತೃಪ್ತಿ ತಂದಿದೆ ಎನ್ನುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಜೆ.ಪಿ ನಡ್ಡಾ, ಅರುಣ್ ಸಿಂಗ್ ಜತೆ ಸುದೀರ್ಘ 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿ ಕರ್ನಾಟಕ ಭವನಕ್ಕೆ ವಾಪಸಾದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ದಿಲ್ಲಿ ನಾಯಕರಿಂದಲೇ ಶುಭ ಸುದ್ದಿ ಬರಲಿದೆ ಎಂದಿದ್ದಾರೆ.

ಕೇಂದ್ರ ನಾಯಕರ ಜತೆಗಿನ ಸಭೆ ತೃಪ್ತಿ ತಂದಿದೆ. ಸಂಪುಟ ವಿಸ್ತರಣೆಯ ಬಗ್ಗೆ ಕೇಂದ್ರ ನಾಯಕರಿಗೆ ಎಲ್ಲಾ ರೀತಿಯ ಮಾಹಿತಿಯನ್ನೂ ನೀಡಿದ್ದೇನೆ. ಆದಷ್ಟು ಬೇಗ ಶುಭ ಸುದ್ದಿ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಮುಂದಿನ ಉಪಚುನಾವಣೆಗಳಿಗೆ ಅಭ್ಯರ್ಥಿಗಳ ಪಟ್ಟಿ ನೀಡುವಂತೆ ಕೇಳಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸಾಧನೆಯನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.
ಬಿಎಸ್‍ವೈ-ವಿಜಯೇಂದ್ರ ಚರ್ಚೆ..
ಅಮಿತ್ ಶಾ, ಜೆ.ಪಿ ನಡ್ಡಾ ಜತೆ ಚರ್ಚೆ ನಡೆಸಿದ ಬಳಿ ನೇರವಾಗಿ ಕರ್ನಾಟಕ ಭವನಕ್ಕೆ ಬಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಜತೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಅಮಿತ್ ಶಾ ನೀಡಿರುವ ಸಲಹೆ ಸೂಚನೆಗಳು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ನಾಯಕತ್ವ ಬದಲಾವಣೆ ಇತ್ಯಾದಿ ವಿಚಾರಗಳ ಬಗ್ಗೆ ವಿಜಯೇಂದ್ರ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ..!
ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತುದಿಗಾಲಿನಲ್ಲಿ ನಿಂತಿದ್ದರೂ ಕೇಂದ್ರ ನಾಯಕರು ಇಂದೂ ಕೂಡ ಗ್ರೀನ್ ಸಿಗ್ನಲ್ ನೀಡಿಲ್ಲ. ಸಂಕ್ರಾಂತಿ ಬಳಿಕ ಅಂದರೆ ಜನವರಿ 16ರಂದು ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ. ಅಮಿತ್ ಶಾ ಬಂದು ಹೋದ ಬಳಿಕವಷ್ಟೇ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಒಂದು ವೇಳೆ, ಅಮಿತ್ ಶಾ ಬರುವ ಮೊದಲೇ ಸಂಪುಟ ವಿಸ್ತರಣೆ ಆದರೆ, ಸಚಿವ ಸ್ಥಾನ ವಂಚಿತರು ಹಾಗೂ ಬೆಂಬಲಿಗರಿಂದ ಅಮಿತ್ ಶಾ ವಿರುದ್ಧ ಪ್ರತಿಭಟನೆ ಸೇರಿದಂತೆ ಮುಜುಗರ ತರುವಂತಹ ಘಟನೆಗಳು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಅಮಿತ್ ಶಾ ರಾಜ್ಯಕ್ಕೆ ಬಂದು ವಾಪಸ್ ತೆರಳಿದ ಬಳಿಕವಷ್ಟೇ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








