ಬೆಂಗಳೂರು: ಕಳ್ಳ ಸ್ವಾಮಿ ಅಲಿಯಾಸ್ ಯುವರಾಜ್ ವಂಚನೆಯ ಹೊಸ ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕಳ್ ಸ್ವಾಮಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‍ಐಆರ್ ದಾಖಲಾಗಿದೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರು ಬಳಸಿಕೊಂಡು ಸೆಂಟ್ರಲ್ ಸಿಲ್ಕ್ ಬೋರ್ಡ್ ಚೇರ್ಮನ್ ಮಾಡುವುದಾಗಿ ನಂಬಿಸಿ 30 ಲಕ್ಷ ವಂಚನೆ ಮಾಡಿದ ಆರೋಪದಡಿ ಎಫ್‍ಐಆರ್ ದಾಖಲಾಗಿದೆ.

ಬಿಲ್ಡರ್ ಇನಿತ್ ಕುಮಾರ್ ಎಂಬುವರನ್ನು ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲು 2.50 ಕೋಟಿ ರೂ.ಗೆ ಡೀಲ್ ಮಾಡಿದ್ದ. ಅಷ್ಟೊಂದು ಹಣ ಇಲ್ಲ ಎಂದಾಗ 30 ಲಕ್ಷಕ್ಕೆ ಡೀಲ್ ಮಾಡಿಕೊಂಡಿದ್ದ ಯುವರಾಜ್.
ಕಳೆದ ನವೆಂಬರ್‍ನಲ್ಲಿ 30 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ ಯುವರಾಜ್, ತಾನು ಬಿ.ಎಲ್. ಸಂತೋಷ್ ಅವರ ಅಣ್ಣನ ಮಗ ಎಂದು ಪರಿಚಯಿಸಿಕೊಂಡಿದ್ದ. ನೀವು ಯುವಕರಿದ್ದೀರಿ, ರಾಜಕೀಯಕ್ಕೆ ಬರಬೇಕು. ನಿಮ್ಮನ್ನು ರಾಷ್ಟ್ರ ಮಟ್ಟದಲ್ಲಿ ಯೂತ್ ಐಕಾನ್ ಮಾಡುತ್ತೇನೆ ಎಂದು ನಂಬಿಸಿದ್ದ.
ರೇಸ್‍ಕೋರ್ಸ್ ರಸ್ತೆಯ ಐಷಾರಾಮಿ ಹೊಟೇಲ್‍ನಲ್ಲಿ ಹಣ ಡೀಲ್ ಮಾಡಿದ್ದ. ತನಗೆ ಯುವರಾಜ್ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿ ಬಿಲ್ಡರ್ ಇನಿತ್ ಕುಮಾರ್ ದೂರು ನೀಡಿದ್ದಾರೆ. ಈ ಪ್ರಕರಣವನ್ನು ಹೈಗ್ರೌಂಡ್ಸ್ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







