ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ !
ಬೆಂಗಳೂರು, ಜನವರಿ11: ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿಯನ್ನು ನೀಡಿದ್ದು, ಎಸ್‌ಎಸ್‌ಎಲ್ ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕೋರ್ಸ್ ಗಳ ವಾರ್ಷಿಕ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇಲ್ಲದಿದ್ದರೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಮುಂದಾಗಿದೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜು ತರಗತಿಗಳು ನಡೆದಿಲ್ಲ. ಇತ್ತೀಚಿಗೆ ಶಾಲೆ, ಕಾಲೇಜುಗಳು ಪ್ರಾರಂಭವಾಗಿದ್ದರೂ ಮಕ್ಕಳಿಗೆ ಶಾಲೆಗೆ ಹಾಜರಾಗುವಂತೆ ಕಡ್ಡಾಯ ಹೇರುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆ ಬರೆಯಲು ಕನಿಷ್ಠ ಹಾಜರಾತಿ ಇಲ್ಲದಿದ್ದರೂ ಅವಕಾಶ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಲಾಗಿದೆ.
ಪಲ್ಸ್ ಪೋಲಿಯೋ ಕಾರ್ಯಕ್ರಮ ಅನಿರ್ದಿಷ್ಟಾವಧಿಗೆ ಮುಂದೂಡಲು ಕೇಂದ್ರ ಸೂಚನೆ ?
ನಿಯಮದ ಪ್ರಕಾರ ವಿದ್ಯಾರ್ಥಿಯು ವಾರ್ಷಿಕ ಪರೀಕ್ಷೆ ಬರೆಯಲು ಶೇ. 70 ರಷ್ಟು ಮತ್ತು ಶೇ. 75 ಕ್ಕಿಂತ ಹೆಚ್ಚಿನ ಹಾಜರಾತಿ ಕಡ್ಡಾಯವಾಗಿರುತ್ತದೆ. ಈ ಹಿಂದೆ ಅನೇಕ ವಿದ್ಯಾರ್ಥಿಗಳು ಹಾಜರಾತಿ ಕೊರತೆಯಿಂದಾಗಿ ಪರೀಕ್ಷೆಯಿಂದ ವಂಚಿತರಾಗುತ್ತಿದ್ದರು. ಆದರೆ ಈ ಬಾರಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ಬರೆಯಲು ಅವಕಾಶ ನೀಡಿದೆ.
ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆಗೆ ಹಾಜರಾತಿ ಇಲ್ಲದಿದ್ದರೂ ಅವಕಾಶ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ತೆಂಗಿನ ಎಣ್ಣೆಯ 7 ಉತ್ತಮ ಆರೋಗ್ಯ ಪ್ರಯೋಜನಗಳುhttps://t.co/pfEDWVh3JS
— Saaksha TV (@SaakshaTv) January 10, 2021
ಹ್ಯಾಕರ್‌ಗಳು ಗ್ರಾಹಕರ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿದರೆ ಅದಕ್ಕೆ ಬ್ಯಾಂಕ್ ಜವಾಬ್ದಾರಿhttps://t.co/9nRC0iZRbH
— Saaksha TV (@SaakshaTv) January 6, 2021