ಸಿದ್ದರಾಮಯ್ಯಗೆ ಗೋಶಾಪ : ಕೆ.ಎಸ್.ಈಶ್ವರಪ್ಪ ವಾಗ್ದಾಳಿ
ಮಡಿಕೇರಿ : ಸಿದ್ದರಾಮಯ್ಯ ಅವರಿಗೆ ಗೋಶಾಪ ತಟ್ಟಿದೆ. ಇದೇ ಕಾರಣಕ್ಕಾಗಿ ಅವರು ಸಿಎಂ ಸ್ಥಾನ ಕಳೆದುಕೊಂಡರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮಡಿಕೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡಿರುವ ಕುರಿತಾಗಿ ಮಾತನಾಡುತ್ತಿದಾರೆ. ಅವರು ಗೋವು ಮತ್ತು ಹಿಂದುತ್ವದ ಬಗ್ಗೆ ತೀರಾ ಹಗುರವಾಗಿ ಮಾತನಾಡುತ್ತಾರೆ.
ಹೀಗಾಗಿ ಅವರಿಗೆ ಗೋಶಾಪ ತಟ್ಟಿದೆ. ಗೋಶಾಪದಿಂದಲೇ ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋಲನುಭವಿಸಿದರು.
ಇದೇ ರೀತಿ ಅವರು ಗೋವು ಮತ್ತು ಹಿಂದುತ್ವದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದರೇ ಮುಂದೆ ರಾಜ್ಯದಲ್ಲಿ ಎಲ್ಲಿಯೂ ಕಾಂಗ್ರೆಸ್ ಪಕ್ಷವಾಗಲಿ ಅಥವಾ ಸಿದ್ದರಾಮಯ್ಯವಾಗಲಿ ಗೆಲ್ಲೋದಿಲ್ಲ ಎಂದು ಎಚ್ಚರಿಕೆ ಕೊಟ್ಟರು.
ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ : ಅಪ್ಪನಾದ ಖುಷಿಯಲ್ಲಿ ವಿರಾಟ್
ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರು ಕೆಳಗಿಳಿಯುತ್ತಾರೆ ಅಂತ ಸಿದ್ದರಾಮಯ್ಯ ಹೇಳುತ್ತಿರುತ್ತಾರೆ.
ಆದ್ರೆ ರಾಜ್ಯದ ಜನತೆ,ಹೈಕಮಾಂಡ್ ಮತ್ತು ಯಡಿಯೂರಪ್ಪನವರು ಕುಳಿತು ಈ ವಿಚಾರವಾಗಿ ನಿರ್ಧಾರ ಮಾಡುತ್ತಾರೆ ಹೊರತು ಸಿದ್ದರಾಮಯ್ಯ ಅಲ್ಲ ಎಂದು ತಿರುಗೇಟು ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









