ಬೆಂಗಳೂರು: ತೀವ್ರ ಹಗ್ಗಜಗ್ಗಾಟದ ನಡುವೆ ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಂಪುಟಕ್ಕೆ ಸೇರಲಿರುವ 7 ಶಾಸಕರ ಹೆಸರನ್ನು ಅಂತಿಮಗೊಳಿಸಿ ರಾಜಭವನಕ್ಕೆ ಕಳಿಸಿದ್ದಾರೆ. ಆದರೆ, ಈ ಪಟ್ಟಿಯಲ್ಲಿ ಆರ್.ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಹೆಸರನ್ನು ಕೈಬಿಡಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ನೂತನ ಸಚಿವರ ಪಟ್ಟಿಯಲ್ಲಿ ಅಂತಿಮ ಯಾರು..
1.ಉಮೇಶ್ ಕತ್ತಿ
2. ಮುರುಗೇಶ್ ನಿರಾಣಿ
3. ಎಸ್.ಅಂಗಾರ
4. ಸಿ.ಪಿ ಯೋಗೇಶ್ವರ್
5. ಅರವಿಂದ ಲಿಂಬಾವಳಿ
6. ಎಂಟಿಬಿ ನಾಗರಾಜ್
7. ಆರ್.ಶಂಕರ್
ಸಂಪುಟ ಸೇರಲಿರುವ ಪಟ್ಟಿಯನ್ನು ರಾಜಭವನಕ್ಕೆ ಕಳಿಸಲಾಗಿದೆ, ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಮುನಿರತ್ನಗೆ ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ಪ್ರಶ್ನಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದೇ ಮುಖ್ಯಮಂತ್ರಿಗಳು ತೆರಳಿದ್ದಾರೆ.

ಮುನಿರತ್ನ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆಯಿಂದ ನಡೆಸಿದ ಕಸರತ್ತು ವಿಫಲವಾಗಿದೆ. ನಿನ್ನೆ ತಡರಾತ್ರಿವರೆಗೂ ಹೈಕಮಾಂಡ್ ಜತೆ ಲಾಬಿ ನಡೆಸಿದರೂ ರಾಥ್ರಿ 12.30ರ ವೇಳೆ ದೆಹಲಿಯಿಂದ ಬಂದ ಫೋನ್ ಕಾಲ್ ಮುನಿರತ್ನ ಸಚಿವರಾಗುವ ಆಸೆಗೆ ತಣ್ಣೀರೆರಚಿತು.
ಇಂದು ಬೆಳಿಗ್ಗೆ ಮುನಿರತ್ನ ಅವರನ್ನು ಮನೆಗೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಮನವೊಲಿಕೆ ಯತ್ನ ನಡೆಸಿದ್ದಾರೆ. ಮುನಿರತ್ನ ಹೆಸರು ಅಂತಿಮಗೊಳಿಸಲು ಹೈಕಮಾಂಡ್ ಸುತಾರಾಂ ಒಪ್ಪದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಕೈಬಿಟ್ಟು 7 ಮಂದಿ ಹೆಸರಿರುವ ಪಟ್ಟಿಯನ್ನು ರಾಜಭವನಕ್ಕೆ ಕಳಿಸಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಈ ನಡುವೆ, ಅರವಿಂದ ಲಿಂಬಾವಳಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಲಿಂಬಾವಳಿ ಜತೆಗೆ ಸಿ.ಪಿ ಯೋಗೇಶ್ವರ್ ಸಂಪುಟ ಸೇರಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








