`ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ’
ಬೆಂಗಳೂರು : ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ.
ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂಬ ಹೇಳಿಕೆ ವಿಚಾರವಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ ಎಂದು ಕುಟುಕಿದ್ದಾರೆ.
`ನಾನು ಗೋಮಾಂಸ ತಿಂದಿಲ್ಲ, ತಿನ್ನಬೇಕು ಅನ್ಸಿದ್ರೆ ತಿಂತೀನಿ’
ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ.

ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕøತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ.
ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ಪೂರ್ತಿ ವರ್ಷ ಮುಖ್ಯಮಂತ್ರಿಯಾಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








