ಧಾರವಾಡ: ಗೋವಾ ಪ್ರವಾಸಕ್ಕೆ ಹೊರಟಿದ್ದ ಮಹಿಳಾ ಕ್ಲಬ್‍ವೊಂದರ ಸದಸ್ಯರಿದ್ದ ಟೆಂಪೋ ಟ್ರಾವೆಲರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯೆ ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿ ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರು ದಾವಣಗೆರೆಯ ಲೇಡಿಸ್ ಕ್ಲಬ್‍ವೊಂದರ ಸದಸ್ಯರು. ಬಹಳ ದಿನಗಳ ಬಳಿಕ ಒಂದೆಡೆ ಸೇರಿದ್ದ ಕ್ಲಬ್ ಸದಸ್ಯರು, ಗೋವಾಕ್ಕೆ ಪ್ರವಾಸ ಹೊರಟಿದ್ದರು. ಇವರಲ್ಲಿ ಮಾಜಿ ಶಾಸಕ ದೊಡ್ಡನಗೌಡರ ಸೊಸೆ ಹಾಗೂ ಸ್ತ್ರೀರೋಗ ತಜ್ಞೆ ಡಾ.ವೀಣಾ ಪ್ರಕಾಶ್ ಕೂಡ ಇದ್ದರು. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತೆಯರೆಲ್ಲ ಸೇರಿಕೊಂಡು ಗೋವಾ ಪ್ರವಾಸ ಹೋಗಲು ನಿರ್ಧರಿಸಿದ್ದರು.

ಇಂದು ಬೆಳಗಿನ ಜಾವ 3 ಗಂಟೆ ಹೊತ್ತಿಗೆ ದಾವಣಗೆರೆಯಿಂದ ಟೆಂಪೋ ಟ್ರಾವೆಲರ್‍ನಲ್ಲಿ ಪ್ರಯಾಣ ಆರಂಭಿಸಿದ್ದರು. ಟೆಂಪೋ ಟ್ರಾವೆಲರ್ ಧಾರವಾಡದ ಇಟ್ಟಿಗಟ್ಟಿ ಬಳಿ ಬರುತ್ತಿದ್ದಾಗ ಅಪಘಾತವಾಗಿದೆ. ಎದುರಿನಿಂದ ಬರುತ್ತಿದ್ದ ಲಾರಿ ಟೆಂಪೋ ಟ್ರಾವೆಲರ್‍ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆ ಎಷ್ಟಿತ್ತು ಎಂದರೆ ಟೆಂಪೋ ಟ್ರಾವೆಲರ್ ಸಂಪೂರ್ಣ ಅಪ್ಪಚ್ಚಿಯಾಗಿದೆ. ಟೆಂಪೋ ಟ್ರಾವೆಲರ್‍ನಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಡಬೇಕಾಯಿತು.
ಅಪಘಾತದಲ್ಲಿ ಮೃತಪಟ್ಟವರ ಹೆಸರು..
1. ಡಾ.ವೀಣಾ ಪ್ರಕಾಶ್
2. ಪ್ರವೀಣಾ
3. ಪ್ರೀತಿ ರವಿಕುಮಾರ್
4. ಮಾನಸಿ
5. ಪರಂಜ್ಯೋತಿ
6. ಶಕುಂತಲಾ
7. ವೇದಾ
9. ರಾಜೇಶ್ವರಿ
10. ನಿರ್ಮಲಾ
11. ಮಂಜುಳಾ ನಿಲೇಶ
12. ರಜನಿ ಶ್ರೀನಿವಾಸ
ಸ್ಥಳಕ್ಕೆ ಧಾರವಾಡ ಎಸ್ಪಿ, ಹಿರಿಯ ಅಧಿಕಾರಿಗಳು ಹಾಗೂ ಧಾರವಾಡ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel






