ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ : ಸಾವಿನ ಸಂಖ್ಯೆ 35ಕ್ಕೆ ಏರಿಕೆ
ಇಂಡೋನೇಷ್ಯಾ: ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಸಾವನಪ್ಪಿದ್ದವರ ಸಂಖ್ಯೆ 35ಕ್ಕೇರಿದೆ. ಇನ್ನೂ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಕಂಪನ ದಾಖಲಾಗಿದ್ದು ಕಂಪನದಿಂದಾಗಿ ಕುಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದ ಜನರ ಪತ್ತೆಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಕಾಮಪಿಶಾಚಿಗಳ ಅಟ್ಟಹಾಸಕ್ಕೆ ಬಲಿಯಾದಳು 16 ವರ್ಷದ ಅಪ್ರಾಪ್ತೆ..!
ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಗಾಯಗೊಂಡವರ ಸಂಖ್ಯೆ 600 ಎಂದು ಅಂದಾಜಿಸಲಾಗಿದೆ. ಕಂಪನದಿಂದ ನಗರದ ಆಸ್ಪತ್ರೆಯೊಂದು ಕುಸಿದು ಬಿದ್ದಿದ್ದು ಅದರಡಿಯಲ್ಲಿ ಅನೇಕರು ಸಿಲುಕಿ ಕೊಂಡಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಇತ್ತೀಚೆಗಷ್ಟೇ ಇಂಡೋನೇಷ್ಯಾದಲ್ಲಿ ವಿಮಾನ ಪಥನ ದುರಂತ ಸಂಭವಿಸಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ ಬೆನ್ನಲ್ಲೇ ಈ ಘಟನೆ ಮತ್ತಷ್ಟು ಬೇಸರಗೊಳಿಸಿದೆ.
ನದಿಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಚಾರ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel