ಸರಣಿ ಸೋಲುಗಳಿಂದ ಕಂಗೆಟ್ಟಿರುವ ಮಧು ಬಂಗಾರಪ್ಪ ಜೆಡಿಎಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಈಗಾಗಲೇ ಜೆಡಿಎಸ್ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಅವರು, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿವೆ. ಮೂಲಗಳ ಪ್ರಕಾರ ಮಧುಬಂಗಾರಪ್ಪ ಕಾಂಗ್ರೆಸ್ ಸೇರುವ ಬಗ್ಗೆ ಕೈ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿದೆಯಂತೆ. ಅದರಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಮಧುಬಂಗಾರಪ್ಪ ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದಾರಂತೆ. ಅದರಂತೆ ಈ ತಿಂಗಳಲ್ಲಿ ಶಿವಮೊಗ್ಗದಲ್ಲಿ ದೊಡ್ಡ ಸಮಾರಂಭ ನಡೆಸಿ ಮಧುಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಕೈ ನಾಯಕರು ಪ್ಲಾನ್ ಮಾಡಿಕೊಂಡಿದ್ದರಂತೆ. ಇದಕ್ಕೆ ಮಧುಬಂಗಾರಪ್ಪ ಈಗಾಗಲೇ ತಳಮಟ್ಟದಲ್ಲಿ ಸಿದ್ಧತೆಗಳನ್ನು ಆರಂಭಸಿದ್ದರು. ಆದ್ರೆ ಕೊರೊನಾ ವೈರಸ್ ನಿಂದಾಗಿ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎನ್ನಲಾಗಿದೆ.
ಕೊರೊನಾ ವೈರಸ್ ಸೋಂಕು ಹರಡುವುದನ್ನ ತಡೆಯಲು ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಸಾರ್ವಜನಿಕರ ಸಭೆ ಸಮಾರಂಭಗಳು ನಡೆಸದಂತೆ ಆದೇಶ ಹೊರಡಿಸಲಾಗಿದೆ. ಹೀಗಾಗಿ ಮಧುಬಂಗಾರಪ್ಪ ಕಾಂಗ್ರೆಸ್ ಸೇರುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ
ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...








