ಬೆಂಗಳೂರು: ಕೊರೊನಾ ಲಸಿಕೆ ನೀಡಿದ ಕ್ಷಣ ಐತಿಹಾಸಿಕವಾಗಿದ್ದು, ದೊಡ್ಡ ದಾಖಲೆಯಂತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಂಗಳೂರು ಮೆಡಿಕಲ್ ಕಾಲೇಜಿನ ಕೊರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಚಿವರು, ಇದು ಐತಿಹಾಸಿಕ ದಿನವಾಗಿದ್ದು, ದಾಖಲೆಯಂತಿದೆ. ಬೇರೆ ರೋಗಗಳಿಗೆ ಲಸಿಕೆ ಪಡೆಯಲು ವರ್ಷಗಳು ತಗುಲಿದೆ. ಆದರೆ ಹತ್ತೇ ತಿಂಗಳಲ್ಲಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಲಾಗಿದೆ. ಮೊದಲು ಸಂಶೋಧಕರಿಗೆ, ಸಂಸ್ಥೆಗಳಿಗೆ ಭಾರತೀಯರು ಆಭಾರಿಯಾಗಿದ್ದಾರೆ. ಇವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ರಾಜ್ಯದಲ್ಲಿ ಮಾರ್ಗದರ್ಶನ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದಗಳು ಎಂದರು.

ರಾಜ್ಯದ 243 ಸ್ಥಳಗಳಲ್ಲಿ ಕೊರೊನಾ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಿದ್ದು, ಇವತ್ತು ಒಂದೇ ದಿನ 24,300 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು. ಸ್ವಚ್ಛತಾ ಸಿಬ್ಬಂದಿ ನಾಗರತ್ನ, ತಾಂತ್ರಿಕ ಸಲಹಾ ಸಮಿತಿಯ 70 ವರ್ಷದ ವೈದ್ಯರು, ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಡಾ.ಸುದರ್ಶನ್ ಬಲ್ಲಾಳ್ ಲಸಿಕೆ ಪಡೆದಿದ್ದಾರೆ. ಖ್ಯಾತ ವೈದ್ಯರು ಲಸಿಕೆ ಪಡೆಯುವ ಮೂಲಕ ಸಾರ್ವಜನಿಕರಲ್ಲಿರುವ ಅಂಜಿಕೆ ನಿವಾರಿಸಲಾಗುತ್ತಿದೆ. ಈ ಲಸಿಕೆ ಅತ್ಯಂತ ಸಮರ್ಪಕವಾಗಿರುವುದಕ್ಕೆ ವೈದ್ಯರು ಲಸಿಕೆ ಪಡೆದಿದ್ದಾರೆ ಎಂಬುದನ್ನು ಜನರು ತಿಳಿಯಬೇಕು ಎಂದರು.
ಸರ್ಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಮಾಹಿತಿ ಮಾತ್ರ ಅಧಿಕೃತವಾಗಿದೆ. ಬೇರೆ ಕಡೆ ಪ್ರಕಟಿಸುವ ತಪ್ಪು ಮಾಹಿತಿಯನ್ನು ಜನರು ನಂಬಬಾರದು. ಅಡ್ಡ ಪರಿಣಾಮ ಉಂಟಾದರೆ ತಕ್ಷಣ ಸೂಕ್ತ ಚಿಕಿತ್ಸೆ ಲಭ್ಯವಿದೆ. ಕ್ಲಿನಿಕಲ್ ಟ್ರಯಲ್ ನಲ್ಲೇ 20-30 ಸಾವಿರ ಜನರ ಮೇಲೆ ಪ್ರಯೋಗ ಮಾಡಲಾಗಿದೆ. ಆದ್ದರಿಂದ ಆತಂಕ ಬೇಕಿಲ್ಲ. ವಿದೇಶಗಳಲ್ಲೂ ಈ ಲಸಿಕೆಗೆ ಬೇಡಿಕೆಯಿದ್ದು, ಅತ್ಯಂತ ಕಡಿಮೆ ದರದ ಲಸಿಕೆಯಾಗಿದೆ. ಕೇವಲ 210 ರೂ. ನಲ್ಲಿ ಲಸಿಕೆ ಹಾಕಿಸಿಕೊಳ್ಳಬಹುದು. ವಿದೇಶಗಳಲ್ಲಿ 2-3 ಸಾವಿರ ರೂ. ದರವಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ, ಎರಡನೇ ಹಂತದಲ್ಲಿ ಕೋಮಾರ್ಬಿಡಿಟಿ ಇರುವವರಿಗೆ ಲಸಿಕೆ ನೀಡಲಾಗುವುದು ಎಂದರು.
ಲಸಿಕೆ ವಿಚಾರದಲ್ಲಿ ರಾಜಕೀಯ ಬೇಡ
ವಿರೋಧ ಪಕ್ಷಗಳು ಲಸಿಕೆ ವಿಚಾರವನ್ನು ರಾಜಕೀಯ ವಿಚಾರ ಮಾಡಿರುವುದಕ್ಕೆ ವಿಷಾಧವಾಗಿದೆ. ಪ್ರತಿಪಕ್ಷಗಳು ಇಷ್ಟೊಂದು ಕೆಳಮಟ್ಟಕ್ಕೆ ಇಳಿಯಬಾರದು. ಈ ಲಸಿಕೆ ಪಡೆಯುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಸುಧಾಕರ್, ಈಗ ಲಸಿಕೆ ಪಡೆದವರಿಗೆ ಯಾವುದೇ ಅಡ್ಡ ಪರಿಣಾಮ ಆಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದರು.

ಲಸಿಕೆಯನ್ನು ಮೊದಲಿಗೆ ನಾನು ಕೂಡ ಪಡೆಯಬೇಕೆಂದಿದ್ದೆ. ಆದರೆ ಮೊದಲ ಹಂತದಲ್ಲಿ ಕೊರೊನಾ ಯೋಧರಿಗೆ ನೀಡಬೇಕೆಂದು ಪ್ರಧಾನಿಗಳು ಸೂಚಿಸಿದ್ದಾರೆ. ಲಸಿಕೆ ವಿತರಣೆಗೆ ಇನ್ನಷ್ಟು ವ್ಯವಸ್ಥೆ ಮಾಡಲಾಗುವುದು. ಒಂದು ವಾರದಲ್ಲೇ ಆರೋಗ್ಯ ಸಿಬ್ಬಂದಿಗೆ ಲಸಿಕೆ ವಿತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಕಾಂಗ್ರೆಸ್‍ನವರು ವಿಐಪಿ ಸಂಸ್ಕøತಿಯಿಂದ ಹೊರಬರುವುದಿಲ್ಲ. ಅವರಿಗೆ ಇನ್ನೂ ಬುದ್ಧಿ ಬಂದಿಲ್ಲ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಾಗಿಲ್ಲ. ಜನರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವರು ತಿರುಗೇಟು ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








