ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ಚಾಣಾಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಕಳೆದ ರಾತ್ರಿ ರಹಸ್ಯ ಸಭೆ ನಡೆಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಡಳಿತ ವೈಖರಿ, ಭಿನ್ನಮತ, ಯಡಿಯೂರಪ್ಪ ಉತ್ತರಾಧಿಕಾರಿ ಯಾರಾಗಬೇಕು ಎಂಬುದರ ಕುರಿತು ಸುಮಾರು 2 ಗಂಟೆಗಳ ಕಾಲ ರಹಸ್ಯ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ನಗರದ ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇತರೆ ನಾಯಕರು ಮನೆಗೆ ತೆರಳಿದರು. ಯಡಿಯೂರಪ್ಪ ಮನೆಗೆ ತೆರಳಿದ ನಂತರ ಉಸ್ತುವಾರಿ ಅರುಣ್ ಸಿಂಗ್, ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್, ಸಿ.ಟಿ ರವಿ ಹಾಗೂ ಪ್ರಹ್ಲಾದ್ ಜೋಶಿ ಜೊತೆ ಸತತ ಎರಡು ಗಂಟೆಗಳ ಕಾಲ ಅಮಿತ್ ಶಾ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಹಸ್ಯ ಸಭೆಯ ಪ್ರಮುಖ ಅಂಶಗಳು..
* ಬಿ.ಎಸ್ ಯಡಿಯೂರಪ್ಪ ನಂತರ ಉತ್ತರಾಧಿಕಾರಿ ಯಾರು..?
* ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಕೆಳಗಿಳಿಸಿದರೆ ಆಗುವ ಸಾಧಕ-ಬಾಧಕ ?
* ಸರ್ಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಹೇಗೆ ?
* ಸರ್ಕಾರ ಹಾಗೂ ಪಕ್ಷದಲ್ಲಿ ಕುಟುಂಬದ ಹಸ್ತಕ್ಷೇಪಕ್ಕೆ ಬ್ರೇಕ್ ?
* ಶಾಸಕರು, ಮುಖಂಡರ ಅಸಮಾಧಾನ ಬಗೆಹರಿಸುವುದು
ಈ ವಿಷಯಗಳಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆಯ ಸಾಧಕ-ಬಾಧಕಗಳ ಬಗ್ಗೆಯೇ ಅಮಿತ್ ಶಾ ನಡೆಸಿದ ರಹಸ್ಯ ಸಭೆಯಲ್ಲಿ ಹೆಚ್ಚು ಚರ್ಚೆ ನಡೆದಿದೆ ಎನ್ನಲಾಗಿದೆ. ಯಡಿಯೂರಪ್ಪ ಅವರ ನಂತರ ರಾಜ್ಯ ಬಿಜೆಪಿ ನಾಯಕತ್ವವನ್ನು ಯಾರು ಮುಂದುವರೆಸಬೇಕು, ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಪಕ್ಷ ಮುನ್ನಡೆಸಲು ಯಾರು ಸಮರ್ಥರಿದ್ದಾರೆ. ರಾಜ್ಯದ ಪ್ರಬಲ ಲಿಂಗಾಯತ ಸಮುದಾಯ ಬಿಜೆಪಿಯಿಂದ ದೂರವಾಗದಂತೆ ನೋಡಿಕೊಳ್ಳುವುದು ಹೇಗೆ ಇತ್ಯಾದಿ ವಿಚಾರಗಳ ಬಗ್ಗೆ ಅಮಿತ್ ಶಾ ರಾಜ್ಯ ನಾಯಕರ ಜತೆ ಚರ್ಚೆ ನಡೆಸಿದರು ಎನ್ನಲಾಗಿದೆ.
ಈ ನಡುವೆ, ಸಚಿವ ಸ್ಥಾನ ಹಾಗೂ ಅನುದಾನ ಹಂಚಿಕೆಯಲ್ಲಿ ಬಿಜೆಪಿ ಶಾಸಕರ ಅಮಸಧಾನ, ಬಂಡಾಯದ ಬಗ್ಗೆಯೂ ಅಮಿತ್ ಶಾ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಸರ್ಕಾರ ಹಾಗೂ ಅವರ ನಂತರ ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯತೆ ತರುವುದು ಹೇಗೆ, ಆಡಳಿತದಲ್ಲಿ ಯಡಿಯೂರಪ್ಪ ಕುಟುಂಬದ ಹಸ್ತಕ್ಷೇಪಕ್ಕೆ ಬ್ರೇಕ್ ಹಾಕುವುದು ಹೇಗೆ ? ಯಡಿಯೂರಪ್ಪ ಇಲ್ಲದ ಬಿಜೆಪಿಯನ್ನು ಸಂಘಟಿಸುವುದು ಹೇಗೆ ಇತ್ಯಾದಿ ವಿಚಾರಗಳ ಬಗ್ಗೆ ನಾಯಕರಿಂದ ಅಮಿತ್ ಶಾ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸದ್ಯ ಬಿಜೆಯಲ್ಲಿ ನಡೆಯುತ್ತಿರುವ ಯಡಿಯೂರಪ್ಪ ನಾಯಕತ್ವ ಬದಲಾವಣೆ, ಬಜೆಟ್ ಬಳಿಕ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಲ್ಲಿ ಕೆಳಗಿಳಿಸಲಾಗುತ್ತಿವೆ ಎಂಬ ಮಾತುಗಳು ಹರಿದಾಡುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಕ್ರಾಂತಿ ಬಳಿಕ ಯಡಿಯೂರಪ್ಪ ಪತನ ಶುರುವಾಗಲಿದೆ, ಸಂಕ್ರಮಣವಾಗಲಿದೆ ಎಂದು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಅಮಿತ್ ಶಾ ತಡರಾತ್ರಿ ನಡೆಸಿದ ರಹಸ್ಯ ಸಭೆ ಭಾರಿ ಕುತೂಹಲ ಮೂಡಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel