ಅಡಿಗಲ್ಲು ಫಲಕದಲ್ಲಿ ಕನ್ನಡ ಮಾಯ : ಹೆಚ್ ಡಿಕೆ ಆಕ್ರೋಶ
ಬೆಂಗಳೂರು : ಶಿವಮೊಗ್ಗದ ಭದಾವತಿಯಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಈ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, ಅದರ ಅಡಿಗಲ್ಲು ಫಲಕದಲ್ಲಿ ಕನ್ನಡವನ್ನು ಅವಗಣನೆ ಮಾಡಲಾಗಿತ್ತು. ಈ ಬಗ್ಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ನಲ್ಲಿ, ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ,ಕನ್ನಡಿಗರಿಗೆ ಮಾಡಿದ ಅಗೌರವ.ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ.
ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಖಂಈ ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








