ಬೆಂಗಳೂರು: ಕರ್ನಾಟಕ ಆಕ್ರಮಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ಖಚಿತ ಎನ್ನುವ ಮೂಲಕ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕೆದಕಿರುವ ಉದ್ಧವ್ ಠಾಕ್ರೆ ವಿರುದ್ಧ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಸಿಎಂ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಯಡಿಯೂರಪ್ಪ ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ.
ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಮುಖ್ಯಮಂತ್ರಿಗಳ ಕಚೇರಿಯ ಟ್ವೀಟ್ನಲ್ಲಿ ತಿರುಗೇಟು ಕೊಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel