ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ)ತರಬೇತಿ ಕಾರ್ಯಕ್ರಮಕ್ಕೆ ನಾಳೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟನೆ

admin by admin
January 18, 2021
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ)ತರಬೇತಿ ಕಾರ್ಯಕ್ರಮಕ್ಕೆ ನಾಳೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟನೆ

ಬೆಂಗಳೂರು,ಜ.18: ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ನೀಡುತ್ತಿರುವ ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ)ತರಬೇತಿ ಕಾರ್ಯಕ್ರಮವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟಿಸಲಿದ್ದಾರೆ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಅಂದ್ಹಾಗೆ ಜ.19 ರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಸಿಎಫ್ ಟಿಆರ್ಐ ಸಭಾಂಗಣದಲ್ಲಿ ತರಬೇತಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದ್ದು,ಕಾರ್ಯಕ್ರಮವನ್ನು ಕೃಷಿ ಸಚಿವರು ಉದ್ಘಾಟಿಸಲಿದ್ದಾರೆ.

ಆತ್ಮ ನಿರ್ಭರ್ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ಕ್ರಮಬದ್ಧಗೊಳಿಸುವಿಕೆ ಯೋಜನೆಯನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು,ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ಬೆಳೆಯನ್ನು ಪ್ರೋತ್ಸಾಹಿಸುವುದು ಆಗಿರುತ್ತದೆ. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ)ಯೋಜನೆಯಡಿ ಉತ್ಪನ್ನಗಳನ್ನು ಗುರುತಿಸಿ, ಈ ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಿಸಲು ರೈತರಿಗೆ ತರಬೇತಿ ನೀಡಲಾಗುತ್ತಿದೆ.

bc-patil

ಹಣ್ಣು ತರಕಾರಿ ಸಂಸ್ಕರಣೆ ಮತ್ತು ಮಾರುಕಟ್ಟೆಯನ್ನೊಳಗೊಂಡ ಮೊದಲ ತರಬೇತಿ ಮುಗಿದಿದ್ದು, ಒಟ್ಟು 10 ತರಬೇತಿಗಳು ಮಾರ್ಚ್ ವರೆಗೆ ನಡೆಯಲಿವೆ. ಜ.11 ರಿಂದ 16 ರವರೆಗೆ ಒಂದು ತರಬೇತಿ ಮುಗಿದಿದ್ದು, ಜ.18 ರಿಂದ ಎರಡನೇ ತರಬೇತಿ ಆರಂಭಗೊಂಡಿದೆ.

ಈ ಎರಡನೇ ತರಬೇತಿಯಲ್ಲಿ ಸಾಂಬಾರು ಮತ್ತು ತೋಟಗಾರಿಕಾ ಬೆಳೆಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಕುರಿತು ತರಬೇತಿ ನೀಡಲಾಗುತ್ತಿದೆ.

ಪ್ರತಿ ತಾಲೂಕಿನಿಂದ 2 ರೈತರನ್ನು ಆಯ್ಕೆಮಾಡಿ ಒಂದು ಗುಂಪು ರಚಿಸಿ ಒಟ್ಟು 500 ಜನರಿಗೆ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, 6 ದಿನ ನಡೆಯುವ ಈ ತರಬೇತಿಯಲ್ಲಿ ಕೊನೆಯ 2 ದಿನಗಳನ್ನು ಮಾರ್ಕೆಟಿಂಗ್, ಬ್ರ್ಯಾಂಡಿಗಾಗಿ ತರಬೇತಿ ನೀಡಲಾಗುತ್ತಿದೆ.

ಒಂದು ಬ್ಯಾಚ್ ನಲ್ಲಿ 50 ರೈತರನ್ನೊಳಗೊಂಡಂತೆ ಒಟ್ಟು 500 ಆಯ್ದ ರೈತರಿಗೆ 10 ಬ್ಯಾಚ್ ಗಳ ತರಬೇತಿ ಇದಾಗಿದೆ.

ಚಾಮರಾಜನಗರ ಜಿಲ್ಲೆಗೆ ಅರಿಶಿನ, ಮೈಸೂರಿಗೆ ಬಾಳೆ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗೆ ಸಾಂಬಾರು ಬೆಳೆ, ಗದಗಕ್ಕೆ ಬ್ಯಾಡಗಿ ಮೆಣಸಿನಕಾಯಿ, ತುಮಕೂರು, ರಾಮನಗರ,ಹಾಸನ ಜಿಲ್ಲೆಗಳಿಗೆ ತೆಂಗು, ಕೊಡಗಿಗೆ ಕಾಫಿ, ರಾಯಚೂರಿಗೆ ಗುಂಟೂರು ಮೆಣಸಿನಕಾಯಿ,ಶಿವಮೊಗ್ಗ ಜಿಲ್ಲೆಗೆ ಅನಾನಸ್ ಬೆಳೆ, ಬೀದರ್ ಜಿಲ್ಲೆಗೆ ಶುಂಠಿ ಬೆಳೆಯನ್ನು ತರಬೇತಿಗೆ ಆಯ್ಕೆ ಮಾಡಲಾಗಿದೆ.

ರೈತರು ತರಬೇತಿಯ ಸದುಪಯೋಗಪಡಿಸಿಕೊಂಡು ಲಾಭದಾಯಕ ಹಾಗೂ ರೈತೋದ್ಯಮಿ ಪ್ರಗತಿ ಪರ ರೈತರಾಗುವಂತೆ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B C Patilbangalorekarnataka
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram