ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಮೈಸೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕಾಲಿಗೆ ಬಿದ್ದ ಘಟನೆ ನಡೆದಿದೆ. ಮೈಸೂರು ವಿವಿ ರಿಜಸ್ಟ್ರಾರ್ ಶಿವಪ್ಪ ಸಿದ್ದು ಕಾಲಿಗೆ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಭಾನುವಾರ ಮೈಸೂರಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಕುಲಪತಿ prof. ಹೇಮಂತ್ ಕುಮಾರ್ ಹೂವಿನ ಬೊಕ್ಕೆ ನೀಡಿ ಸ್ವಾಗತ ನೀಡಿದರು. ಅವರ ಹಿಂದೆಯೇ ಬಂದ ರಿಜಿಸ್ಟ್ರಾರ್ ಶಿವಪ್ಪ, ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು.

ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ರಾಜಕೀಯ ಮುಖಂಡರ ಕಾಲಿಗೆ ಬಿದ್ದಿರುವ ರಿಜಿಸ್ಟ್ರಾರ್ ಶಿವಪ್ಪ ಅವರ ನಡವಳಿಕೆ ಸಾಕಷ್ಟು ಚರ್ಚೆಗೆ ಈಡು ಮಾಡಿಕೊಟ್ಟಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








