ಬೆಂಗಳೂರು: ಮಾಜಿ ಶಾಸಕ ಅನಿಲ್ ಲಾಡ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕೈಗಳಿಗೆ ಗಂಭೀರವಾದ ಪೆಟ್ಟುಬಿದ್ದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ಸಂಜಯ ನಗರದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡ ಅನಿಲ್ ಲಾಡ್ ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ನೇಹಿತರ ಮನೆಗೆ ತೆರಳಿ ಪತ್ನಿ ಜತೆ ವಾಪಸ್ ಬರುತ್ತಿದ್ದಾಗ ಕಾರಿಗೆ ನಾಯಿ ಅಡ್ಡ ಬಂದಿದೆ. ನಾಯಿಯನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ನಡೆದಾಗ ಅನಿಲ್ ಲಾಡ್ ಪತ್ನಿ ಕಾರು ಚಲಾಯಿಸುತ್ತಿದ್ದರು. ಅಪಘಾತದ ತೀವ್ರತೆಗೆ ಅನಿಲ್ ಲಾಡ್ ಅವರ ಎರಡು ಕೈಗಳಿಗೆ ತೀವ್ರತರವಾದ ಪೆಟ್ಟು ಬಿದ್ದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಆರ್.ಟಿ ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








