ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ವ್ಯಾಯಾಮ ಮತ್ತು ಆಹಾರದ ನಿರ್ಬಂಧಗಳಿಲ್ಲದೆ ತೂಕ ಕಡಿಮೆ ಮಾಡಲು ಜೇನು ಮತ್ತು ಬೆಳ್ಳುಳ್ಳಿಯ ಮನೆಮದ್ದು

Shwetha by Shwetha
January 19, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips weight loss
Share on FacebookShare on TwitterShare on WhatsappShare on Telegram

ವ್ಯಾಯಾಮ ಮತ್ತು ಆಹಾರದ ನಿರ್ಬಂಧಗಳಿಲ್ಲದೆ ತೂಕ ಕಡಿಮೆ ಮಾಡಲು ಜೇನು ಮತ್ತು ಬೆಳ್ಳುಳ್ಳಿಯ ಮನೆಮದ್ದು Saakshatv healthtips weight loss

ಮಂಗಳೂರು, ಜನವರಿ19: ಬೆಳ್ಳುಳ್ಳಿಯು ಹಲವಾರು ಔಷಧೀಯ ಗುಣಗಳನ್ನು ಹೊಂದಿದ್ದು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಭಾರತೀಯ ಪಾಕಗಳಲ್ಲಿ ಹೆಚ್ಚಾಗಿ ಬಳಸುವ ಈ ಬೆಳ್ಳುಳ್ಳಿಯಲ್ಲಿ ಹಲವಾರು ಆರೋಗ್ಯದ ರಹಸ್ಯಗಳು ಅಡಗಿವೆ. Saakshatv healthtips weight loss

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಬೆಳ್ಳುಳ್ಳಿಯ ನಿಯಮಿತ ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಇದು ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಪಧಮನಿಗಳ ಮೂಲಕ ರಕ್ತದ ಸುಗಮ ಹರಿವಿಗೆ ನೆರವಾಗುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಉರಿಯೂತದ ವಿರುದ್ಧ ಹೋರಾಡಲು ಸಹ ಇದು ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿರುವ ಪ್ಲೇವೊನೋಯ್ಡ್ಸ್ ಡಿಎನ್ಎಗೆ ಹಾನಿಯಾಗದಂತೆ ಕಾಪಾಡುವ ‌ಕಾರಣ ಇದು ಕ್ಯಾನ್ಸರ್‌ ಕಣಗಳು ಉಂಟಾಗುವುದನ್ನು ತಡೆಯಲು ನೆರವಾಗುತ್ತದೆ.

Saakshatv healthtips weight loss
ಬೆಳ್ಳುಳ್ಳಿಯಲ್ಲಿ ಆ್ಯಂಟಿಆಕ್ಸಿಡೆಂಡ್ ಅಂಶ ಹೆಚ್ಚಾಗಿರುವ ಕಾರಣ ಮಾನಸಿಕ ಒತ್ತಡ ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ
ಅಷ್ಟೇ ಅಲ್ಲ ಬೆಳ್ಳುಳ್ಳಿ ಪರಿಣಾಮಕಾರಿಯಾಗಿ ತೂಕವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ. ‌ ಇದು ಬಿ 6 ಮತ್ತು ಸಿ, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂನಂತಹ ಅನೇಕ ಜೀವಸತ್ವಗಳಿಂದ ತುಂಬಿದೆ. ಇದು ಯಾವುದೇ ಸಮಯದಲ್ಲೂ ಹೆಚ್ಚುವರಿ ಕೊಬ್ಬನ್ನು, ವಿಶೇಷವಾಗಿ ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಸಹಾಯ ಮಾಡುವ ಸೂಪರ್ ಆಹಾರವಾಗಿದೆ. ಬೆಳ್ಳುಳ್ಳಿ ಸಹಾಯದಿಂದ ವ್ಯಾಯಾಮ ಮತ್ತು ಆಹಾರದ ನಿರ್ಬಂಧಗಳಿಲ್ಲದೆ ತೂಕವನ್ನು ಕಳೆದುಕೊಳ್ಳಬಹುದಾಗಿದೆ.

ಬೆಳ್ಳುಳ್ಳಿ ಸೇವನೆಯಿಂದ ತೂಕ ಇಳಿಸುವುದು ಹೇಗೆ

ನೀವು ತೂಕ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದರೆ, ಅದು ಸುಲಭವಲ್ಲ ಎಂದು ನಿಮಗೆ ಈಗಾಗಲೇ ತಿಳಿದಿರುತ್ತದೆ. ಕೆಲವೊಮ್ಮೆ, ಶ್ರಮದಾಯಕ ವ್ಯಾಯಾಮದಿಂದ ಹಿಡಿದು ಆಹಾರ ಸೇವನೆಯನ್ನು ಕಡಿಮೆಗೊಳಿಸಿದರೂ ಸಹ, ತೂಕವನ್ನು ಕಳೆದುಕೊಳ್ಳಲು ಅಸಾಧ್ಯವಾಗಬಹುದು. ಆದರೆ ಹಸಿ ಬೆಳ್ಳುಳ್ಳಿ ಸೇವನೆ ತೂಕವು‌ ಕಳೆದುಕೊಳ್ಳಲು ಒಂದು ಉತ್ತಮ ರಹಸ್ಯವಾಗಿದೆ.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯುವುದು, ಮುಂಜಾನೆ ನಿಂಬೆ ಮತ್ತು ಜೇನುತುಪ್ಪವನ್ನು ಸೇವಿಸುವುದು ಮತ್ತು ಇತರ ವಿಧಾನಗಳ ಬಗ್ಗೆ ನಿಮಗೆ ತಿಳಿದಿರಬಹುದು. ಆದರೆ ಇಲ್ಲಿ, ನಾವು ಬೆಳ್ಳುಳ್ಳಿಯನ್ನು ಜೇನುತುಪ್ಪದಲ್ಲಿ ಸೇರಿಸಿ ಹೇಗೆ ಪರಿಣಾಮಕಾರಿಯಾಗಿ ತೂಕವನ್ನು ಕಳೆದುಕೊಳ್ಳಬಹುದು ‌ಎಂದು ತಿಳಿಸಿದ್ದೇವೆ .

ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುವ ಸೂಪರ್ ಪವರ್‌ಫುಲ್ ಆಹಾರಗಳು

ಹಸಿ ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಪ್ರಯೋಜನಗಳು

ಖಾಲಿ ಹೊಟ್ಟೆಯಲ್ಲಿ ಎರಡು ಹಸಿ ಬೆಳ್ಳುಳ್ಳಿಯನ್ನು ಸೇವಿಸಿದರೆ, ಅದು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ದೇಹವನ್ನು ನಿರ್ವಿಷಗೊಳಿಸುತ್ತದೆ. ಅಷ್ಟೇ ಅಲ್ಲ, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟದಲ್ಲಿ ಸಹ ಸುಧಾರಣೆಯನ್ನು ಕಾಣಬಹುದು.
ಉತ್ತಮ ರೋಗನಿರೋಧಕ ಶಕ್ತಿಯನ್ನು ಪಡೆಯಲು ಕೂಡ ಬೆಳ್ಳುಳ್ಳಿ ಸಹಕಾರಿಯಾಗಿದೆ. ಇದು ಶೀತ ಮತ್ತು ಜ್ವರವನ್ನು ಕಡಿಮೆಗೊಳಿಸುವುದರ ಜೊತೆಗೆ ತೂಕವನ್ನು ಕಳೆದುಕೊಳ್ಳಲು ಸಹ ಸಹಾಯ ಮಾಡುತ್ತದೆ.

ಆದರೆ ಇದಕ್ಕೆ ನೀವು ಜೇನುತುಪ್ಪವನ್ನು ಸೇರಿಸಿದಾಗ, ಅದು ನಿಮ್ಮನ್ನು ಸಂಪೂರ್ಣವಾಗಿ ನಿರ್ವಿಷಗೊಳಿಸುವ ಪ್ರಬಲ ಟಾನಿಕ್ ಆಗುತ್ತದೆ. ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಮೂಲಕ ಮತ್ತು ಚಯಾಪಚಯವನ್ನು ಹೆಚ್ಚಿಸಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಜೇನು ಹಸಿವನ್ನು ತಡೆಯುತ್ತದೆ ಮತ್ತು ಇದು ಕೊಬ್ಬು ಮತ್ತು ಕೊಲೆಸ್ಟ್ರಾಲ್ ಮುಕ್ತವಾಗಿದೆ. ಇದರ ಸೇವನೆ ದಿನವಿಡೀ ನಿಮ್ಮನ್ನು ಚೈತನ್ಯಗೊಳಿಸುತ್ತದೆ. ಜೊತೆಗೆ ಬೆಳ್ಳುಳ್ಳಿ ನಿಮ್ಮ ತೂಕವನ್ನು ಕಡಿಮೆ ಮಾಡಲು ಮತ್ತು ರೋಗಗಳನ್ನು ದೂರವಿರಿಸಲು ಸಹಾಯ ಮಾಡುತ್ತದೆ.

ಸುಲಭವಾಗಿ ತೂಕವನ್ನು ಕಡಿಮೆ ಮಾಡಲು ಜೇನು ಮತ್ತು ಬೆಳ್ಳುಳ್ಳಿಯ ಟಾನಿಕ್ ತಯಾರಿಸುವ ಬಗೆ ಹೇಗೆ ?

ಗಾಜಿನ ಜಾರು ತೆಗೆದುಕೊಂಡು ಅದರಲ್ಲಿ ಅರ್ಧದಷ್ಟು ಶುದ್ಧವಾದ ಮತ್ತು ಸಾವಯವ ಜೇನುತುಪ್ಪವನ್ನು ತುಂಬಿಸಿ. ಕೆಲವು ಬೆಳ್ಳುಳ್ಳಿಯ ಎಸಳುಗಳನ್ನು ತೆಗೆದುಕೊಂಡು ಅದರ ಸಿಪ್ಪೆಯನ್ನು ತೆಗೆದು ಜೇನುತುಪ್ಪದ ಜಾರಿಗೆ ಸೇರಿಸಿ. ಬೆಳ್ಳುಳ್ಳಿಯನ್ನು ಸಂಪೂರ್ಣವಾಗಿ ಜೇನುತುಪ್ಪದಲ್ಲಿ ಮುಳುಗಿಸಬೇಕು. ಜೇನಿನಲ್ಲಿ ಬೆಳ್ಳುಳ್ಳಿಯ ಎಸಳುಗಳನ್ನು ಬೆರೆಸಿಟ್ಟಿರುವ ಗಾಜಿನ ಜಾರನ್ನು ಒಂದು ತಿಂಗಳವರೆಗೆ ಹಾಗೆಯೇ ಮುಚ್ಚಿಡಿ. ಇದು ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಪೋಷಕಾಂಶಗಳನ್ನು ವಿಲೀನಗೊಳಿಸಲು ಅನುವು ಮಾಡಿಕೊಡುತ್ತದೆ.

ಇದನ್ನು ಸೇವಿಸುವ ‌ಬಗೆ ಹೇಗೆ

ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಉತ್ತಮ ಪರಿಣಾಮವನ್ನು ಕಾಣಬಹುದಾಗಿದೆ. ಗಾಜಿನ ಜಾರಿನಲ್ಲಿರುವ ಬೆಳ್ಳುಳ್ಳಿಯನ್ನು ತೆಗೆದುಕೊಂಡು ಅದನ್ನು ಪುಡಿ ಮಾಡಿ ಸೇವಿಸಿ. ಇದನ್ನು ಪ್ರತಿದಿನ ಒಂದು ತಿಂಗಳವರೆಗೆ ಪ್ರಯತ್ನಿಸಿದರೆ ಗಮನಾರ್ಹ ‌ಬದಲಾವಣೆಯನ್ನು‌ ನೀವು ಗಮನಿಸಬಹುದು.

Saakshatv healthtips weight loss

ಎಚ್ಚರಿಕೆ :

ಇದು ಯಾರಾದರೂ ಬಳಸಬಹುದಾದ ಆರೋಗ್ಯಕರ ಟಾನಿಕ್ ಆಗಿದೆ. ಆದರೆ ನೀವು ಆಸ್ತಮಾದಿಂದ ಬಳಲುತ್ತಿದ್ದರೆ, ಇದನ್ನು ಪ್ರಯತ್ನಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ. ಆಸ್ತಮಾದಿಂದ ಬಳಲುತ್ತಿರುವವರಿಗೆ ಬೆಳ್ಳುಳ್ಳಿ ಒಳ್ಳೆಯದಲ್ಲ. ಅಷ್ಟೇ ಅಲ್ಲ ಇದನ್ನು ಅತಿಯಾಗಿ ಬಳಸದಂತೆ ಕೂಡ ಎಚ್ಚರಿಕೆ ವಹಿಸಿ. ದಿನಕ್ಕೆ ಕೇವಲ 2-3 ಬೆಳ್ಳುಳ್ಳಿ ಎಸಳುಗಳನ್ನು ಬಳಸಿಕೊಂಡು ಈ ಟಾನಿಕ್ ಅನ್ನು ಸೇವಿಸಿ.

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ. ಇದು ವೈದ್ಯರ ಸಲಹೆಗೆ ಪರ್ಯಾಯವಲ್ಲ. ಆದ್ದರಿಂದ ವೈದ್ಯಕೀಯ ಸಲಹೆಯನ್ನು ನಿರ್ಲಕ್ಷಿಸಬೇಡಿ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಆರೋಗ್ಯ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಗೂಗಲ್ ನಲ್ಲಿ saakshatv healthtips ಎಂದು ಸರ್ಚ್ ಮಾಡಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಚಹಾದೊಂದಿಗೆ ಈ ಪದಾರ್ಥಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕ https://t.co/4Zj2CInM6s

— Saaksha TV (@SaakshaTv) January 17, 2021

ಸ್ಮಾರ್ಟ್ಫೋನ್ ಖರೀದಿಸಬೇಕೆಂದಿದ್ದೀರಾ? ಹಾಗಿದ್ದರೆ ಕೆಲವು ದಿನ ಕಾಯಿರಿhttps://t.co/w7BPVNZ9sj

— Saaksha TV (@SaakshaTv) January 18, 2021

Tags: Saakshatv healthtipsSaakshatv healthtips weight lossweight-loss
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram