ಬಿಜೆಪಿಗೆ ಪ್ಲಸ್, `ಕೈ’ಗೆ ಮೈನಸ್, ಬಂಗಾಳದಲ್ಲಿ ದೀದಿ, ತ.ನಾಡಲ್ಲಿ ಡಿಎಂಕೆ ದರ್ಬಾರು..!
ನವದೆಹಲಿ : ಈ ವರ್ಷ ಸಾಲು ಸಾಲು ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಕೇಸರಿ ಪಡೆಗೆ ಪ್ಲಸ್ ಆದ್ರೆ ಕಾಂಗ್ರೆಸ್ ಗೆ ಮೈನಸ್ ಆಗಲಿದೆ. ಬಂಗಾಳದಲ್ಲಿ ದೀದಿ ಆಟ ಮುಂದುವರಿದರೇ ದ್ರಾವಿಡ ನಾಡಲ್ಲಿ ಡಿಎಂಕೆ ದರ್ಬಾರು ಶುರುವಾಗಲಿದೆ. ಕೇರಳದಲ್ಲಿ ಪಿಣರಾಯಿಗೆ ಮತ್ತೆ ಅಧಿಕಾರ ಸಿಕ್ಕರೇ ಪುದುಚೇರಿಯಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಗಳಿವೆ ಅಂತ ಎಬಿಪಿ-ಸಿವೋಟರ್ ಸಮೀಕ್ಷೆ ತಿಳಿಸಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ದೀದಿ ನಾಡು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಟಕ್ಕರ್ ಕೊಡಲೇಬೇಕೆಂದು ಬಿಜೆಪಿ ಬಿಗ್ ಬಾಸ್ ಗಳು ಹಗಲು ರಾತ್ರಿ ಪ್ಲಾನ್ ಮಾಡುತ್ತಿದ್ದಾರೆ. ಶತಾಯಗತಾಯ ಈ ಬಾರಿ ದೀದಿಯನ್ನು ಅಧಿಕಾರದಿಂದ ಕೆಳಗಿಳಿಸಲೇಬೇಕೆಂದು ಹಠಕ್ಕೆ ಬಿದ್ದು ಬಂಗಾಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ರೆ ಎಬಿಪಿ ಸಿವೋಟರ್ ಸಮೀಕ್ಷೆ , ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ಮಾತ್ರ ನೀಡಲಿದೆ, ಆದ್ರೆ 294 ಕ್ಷೇತ್ರಗಳಲ್ಲಿ ಟಿಎಂಸಿ ಪಕ್ಷವನ್ನು ಹಣಿಯಲು ಅದು ಸಾಕಾಗುವುದಿಲ್ಲ. ತೃಣಮೂಲ ಕಾಂಗ್ರೆಸ್ 154-162 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದಿದೆ. ಇನ್ನು ಬಿಜೆಪಿ ಪಶ್ಚಿಮ ಬಂಗಾಳದಲ್ಲಿ 98-106 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಒಟ್ಟಿಗೆ 26-34 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.
ಇನ್ನು ದಕ್ಷಿಣಕ್ಕೆ ಬಂದ್ರೆ ದ್ರಾವಿಡ ನಾಡು ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ತಿಳಿಸಿದೆ. ಸದ್ಯ ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿ ಬೀಸುತ್ತಿದೆ. ಹೀಗಾಗಿ 234 ಕ್ಷೇತ್ರಗಳ ಪೈಕಿ ಆಡಳಿತರೂಢ ಅಣ್ಣಾ ಡಿಎಂಕೆ ಪಕ್ಷ 60-68 ಸ್ಥಾನಕ್ಕೆ ಕುಸಿಯಲಿದೆ. 158-166 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಎಂ.ಕೆ. ಸ್ಟ್ಯಾಲಿನ್ ನೇತೃತ್ವದ ಡಿಎಂಕೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳುತ್ತಿದೆ. ಇನ್ನು ಇದೇ ಮೊದಲ ಬಾರಿಗೆ ಅಖಾಡಕ್ಕೆ ಧುಮುಕಿರುವ ನಟ ಕಮಲ್ ಹಾಸನ್, ಅವರ ಪಕ್ಷ ನಾಲ್ಕು ಸ್ಥಾನಗಳಲ್ಲಿ ಗೆಲ್ಲಬಹುದು ಎಂದಿದೆ.
ಇತ್ತ ಕೇರಳದಲ್ಲಿ ಮತ್ತೆ ಪಿಣರಾಯಿ ನೇತೃತ್ವದ ಸಿಪಿಐ (ಎಂ) ಅಧಿಕಾರಕ್ಕೆ ಬರಲಿದೆ. 140 ಸದಸ್ಯರ ವಿಧಾನಸಭೆಯಲ್ಲಿ ಎಲ್‍ಡಿಎಫ್ 80-89 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ 49-57 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಸಮೀಕ್ಷೆ ತಿಳಿಸಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಪುದುಚೇರಿಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿಗೆ ಸಮೀಕ್ಷೆಯಲ್ಲಿ ಕಹಿ ಸುದ್ದಿ ಬಂದಿದೆ. ಇಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನೇರ ಪೈಪೋಟಿ ಇರಲಿದೆ ಎಂದು ಸಮೀಕ್ಷೆ ಹೇಳಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







