`ಯತ್ನಾಳ್ ಸಲಹೆ ಕೇಳುವ ಮಟ್ಟದಲ್ಲಿ ಪಕ್ಷ ಈಗ ಇಲ್ಲ’ : ಡಿವಿಎಸ್
ಪುತ್ತೂರು :ಯತ್ನಾಳ್ ಸಲಹೆ ಕೇಳುವಂತಹ ಮಟ್ಟದಲ್ಲಿ ಪಕ್ಷ ಈಗ ಇಲ್ಲ.
ಪಕ್ಷಕ್ಕೆ, ಪಕ್ಷದ ನಾಯಕರಿಗೆ ಸಲಹೆ ಕೊಡುವ ಕೆಲಸವನ್ನು ಯತ್ನಾಳ ನಿಲ್ಲಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಗುಡುಗಿದ್ದಾರೆ.
ಸದಾನಂದ ಗೌಡರು ಇಂದು ಪುತ್ತೂರಿನಲ್ಲಿ ನಡೆದ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ಸಂದರ್ಭದಲ್ಲೂ ಯತ್ನಾಳ ಇದೇ ರೀತಿಯ ವರ್ತನೆ ತೋರಿದ್ದರು.
ಆಗ ನಾನು ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದೆ. ಇದೀಗ ಮತ್ತೆ ಅಂತಹದ್ದೇ ವರ್ತನೆಯನ್ನು ತೋರಿಸಲು ಆರಂಭಿಸಿದ್ದಾರೆ.
ಪಕ್ಷದ ವಿರುದ್ಧ, ಪಕ್ಷದ ನಾಯಕರ ವಿರುದ್ಧ ಬೀದಿಯಲ್ಲಿ ಚರ್ಚೆ ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕಾಗಿ ಯತ್ನಾಳ್ ಈ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ ಎನ್ನುವುದು ನಾಯಕರ ಗಮನಕ್ಕೆ ಬಂದಿದೆ ಎಂದು ಹೇಳಿದರು.
ಇನ್ನು ವಾಜಪೇಯಿ ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿದ್ದ ಯತ್ನಾಳ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದ ಡಿವಿಎಸ್, ಇದೇ ರೀತಿಯ ವರ್ತನೆಯನ್ನು ಮುಂದುವರೆಸಿದಲ್ಲಿ ಕೇಂದ್ರ ನಾಯಕರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.
ನೀವು ಶಾಸಕರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿ. ಪಕ್ಷದಲ್ಲಿ ಅಸಮಾಧಾನವಿದ್ದಲ್ಲಿ ಅದನ್ನು ಕೇಂದ್ರ ನಾಯಕರ ಗಮನಕ್ಕೆ ತನ್ನಿ.
ರಾಜ್ಯದ ನಾಯಕರು ದೆಹಲಿಗೆ ಬಂದು ಕೇಂದ್ರ ನಾಯಕರನ್ನು ಭೇಟಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ.
ಅದನ್ನು ಬಿಟ್ಟು ಬೀದಿ ಬದಿಯಲ್ಲಿ ಚರ್ಚೆ ಮಾಡುವುದನ್ನು ಪಕ್ಷ ಸಹಿಸುವುದಿಲ್ಲ ಎಂದು ಯತ್ನಾಳ್ ವಿರುದ್ಧ ಸದಾನಂದಗೌಡ ವಾಗ್ದಾಳಿ ನಡೆಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









