ಇಂದು ಅತೃಪ್ತ ಶಾಸಕರ ಸಭೆ ತಡೆಗೆ ಬಿಎಸ್‍ವೈ ಕಸರತ್ತು
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನಗೊಂಡಿರುವ ಅತೃಪ್ತ ಶಾಸಕರು ಇಂದ ಸಭೆ ಸೇರಲು ನಿರ್ಧರಿಸಿದ್ದು, ಹೈಕಮಾಂಡ್‍ಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸಚಿವ ಸ್ಥಾನ ಸಿಗದ ಬಿಜೆಪಿ ಅತೃಪ್ತ ಶಾಸಕರು ಇಂದು ಸಭೆ ಸೇರುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಆಕ್ಟೀವ್ ಆಗಿರುವ ಯಡಿಯೂರಪ್ಪ, ಅತೃಪ್ತ ಶಾಸಕರನ್ನು ಕರೆಸಿ ಮಾತನಾಡುವ ಮೂಲಕ ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ.

ಹೊನ್ನಾಳಿ ಶಾಸಕ ರೇಣುಕಾಚಾರ್ಯ ವರಿಷ್ಠರ ಭೇಟಿ ವಿಚಾರ ಬಗ್ಗೆ ನನಗೆ ಗೊತ್ತಿದೆ. ಅವರ ಜೊತೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ. ಆಮೇಲೆ ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಇದೇ ವೇಳೆ, ಆಪ್ತ ಸಚಿವರ ಮೂಲಕ ಅತೃಪ್ತ ಶಾಸಕರನ್ನು ಕರೆಸಿಕೊಂಡು ಬಿಎಸ್‍ವೈ ಮಾತನಾಡುತ್ತಿದ್ದಾರೆ. ಅತೃಪ್ತ ಶಾಸಕರಾದ ಅರವಿಂದ ಬೆಲ್ಲದ್
ಜತೆ ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದಾರೆ. ಇಬ್ಬರು ಶಾಸಕರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕರೆ ಮಾಡಿದ್ದಾರೆ. ಬೊಮ್ಮಾಯಿ ಮನವಿ ಮೇರೆಗೆ ಅರವಿಂದ್ ಬೆಲ್ಲದ್ ಸಿಎಂ ಜತೆ ಮಾತುಕತೆಗೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕರು ಸಭೆ ಸೇರಲು ನಿರ್ಧರಿಸಿದ್ದರು. ಸಭೆಯ ವಿಷಯ ತಿಳಿಯುತ್ತಿದ್ದಂತೆ ಅತೃಪ್ತ ಶಾಸಕರನ್ನು ಕರೆಸಿ ಸಿಎಂ ಮಾತನಾಡುವ ಮೂಲಕ ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ.
ಮತ್ತೊಂದೆಡೆ ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ ಅವರು ಸಹ ತಾವು ಆರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆದರೂ ತಮಗೆ ಸಚಿವ ಸ್ಥಾನ ನೀಡಿಲ್ಲ ಎಂದು ಅಸಮಾಧಾನ ಮುಂದುವರೆಸಿದ್ದಾರೆ.
ನಾಳೆ ಸಚಿವರಿಗೆ ಖಾತೆ ಹಂಚಿಕೆ..
ಸಚಿವ ಸಂಪುಟ ವಿಸ್ತರಣೆ ಮಾಡಿ ಇಂದಿಗೆ ಒಂದು ವಾರ ತುಂಬಿದರೂ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ. ಜತೆಗೆ ಜಿಲ್ಲಾ ಉಸ್ತುವಾರಿಯನ್ನೂ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಸಚಿವರ ಜತೆ ಚರ್ಚೆ ನಡೆಸಿ ಗುರುವಾರ ಖಾತೆ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಈಗಾಗಲೇ ಪ್ರಬಲ ಹಾಗೂ ಪ್ರಭಾವಿ ಖಾತೆಗಳ ಮೇಲೆ ಕಣ್ಣಿಟ್ಟಿರುವ ನೂತನ ಸಚಿವರು ಸಿಎಂ ಯಡಿಯೂರಪ್ಪ ಮೇಲೆ ಇದೇ ಖಾತೆ ಬೇಕು ಎಂದು ಲಾಬಿ ನಡೆಸುತ್ತಿದ್ದಾರೆ. ಯಾರಿಗೆ ಯಾವ ಖಾತೆ ಎಂಬುದು ನಾಳೆ ಗೊತ್ತಾಗಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








