ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಬಡವರಿಗೆ ಉಚಿತ ಹಾಲು ವಿತರಿಸುವ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಅಶ್ವತ್ಥ್ ನಗರದಲ್ಲಿ ಮುಖ್ಯಮಂತ್ರಿ ಮತ್ತು ಸಚಿವರ ತಂಡ ಮನೆ ಮನೆಗೂ ತೆರಳಿ ಹಾಲು ವಿತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವ ಶಿವರಾಮ್ ಹೆಬ್ಬಾರ್ ಮೊದಲಾದವರು ಮುಖ್ಯಮಂತ್ರಿಗೆ ಸಾಥ್ ನೀಡಿದರು.
ಮುಖ್ಯಮಂತ್ರಿ ಶ್ರೀ @BSYBJP ಅವರು ಇಂದು ಬೆಂಗಳೂರಿನ ಅಶ್ವತ್ಥ ನಗರದಲ್ಲಿ ಕೊಳೆಗೇರಿ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವ ವ್ಯವಸ್ಥೆಗೆ ಚಾಲನೆ ನೀಡಿದರು.
ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಜೊತೆಗಿದ್ದರು.#KarnatakaFightsCorona pic.twitter.com/CFVs8cqsJf— CM of Karnataka (@CMofKarnataka) April 2, 2020
ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಕೊರೊನಾ ಸೋಂಕು ನಿರ್ಮೂಲನೆಗಾಗಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೂ ರೈತರಿಂದ ಅಬಾಧಿತವಾಗಿ ಹಾಲು ಖರೀದಿಸಲು ಕೆಎಂಎಫ್ ಗೆ ಸೂಚಿಸಲಾಗಿತ್ತು. ಹಾಗೆ ರೈತರಿಂದ ಖರೀದಿಸಲಾಗುತ್ತಿರುವ ಹಾಲಿನ ಪೈಕಿ ಸುಮಾರು 7.5 ಲಕ್ಷ ಲೀಟರ್ ಹಾಲನ್ನು ಬಡವರಿಗೆ ಉಚಿತವಾಗಿ ಹಂಚಬೇಕು ಎಂಬ ನಿರ್ಧಾರಕ್ಕೆ ಬಂದಿದ್ದೆವು. ಅದರಂತೆ ಇಂದಿನಿಂದ ಬೆಂಗಳೂರಿನ ಅಶ್ವತ್ಥ ನಗರದ ಕೊಳಗೇರಿ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವುದರ ಮೂಲಕ ಈ ವ್ಯವಸ್ಥೆಗೆ ಚಾಲನೆ ನೀಡಲಾಯಿತು ಎಂದು ತಿಳಿಸಿದ್ದಾರೆ.








