ಕೈಕೊಟ್ಟವನಿಗಾಗಿ ಪ್ರಾಣ ಕಳೆದುಕೊಂಡಿದ್ದು ಎಷ್ಟು ಸರಿ..!
ಮೈಸೂರು : ಪ್ರಿಯಕರ ಕೈಕೊಟ್ಟ ಫೀಲಿಂಗ್ ನಲ್ಲಿ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮದುವೆ ಆಗುವುದಾಗಿ ನಂಬಿಸಿದ್ದ ಕಿರಾತಕ ಆಕೆಗೆ ಕೈಕೊಟ್ಟು ಮತ್ತೊಬ್ಬ ನರ್ಸ್ ಜೊತೆ ಸುತ್ತಾಡುತ್ತಿದ್ದ ಹಿನ್ನೆಲೆ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ತನ್ನ ಗಂಡ ‘ಅವನಲ್ಲ ಅವಳು’ ಎಂದು ಗೊತ್ತಾಯ್ತು…. ಮುಂದೇನಾಯ್ತು..!
ರಾಘವೇಂದ್ರ ನಗರದ 26 ವರ್ಷದದ ರಶ್ಮಿ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಈಕೆ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಕಾರಣವಾದವರ ಹೆಸರನ್ನೂ ಸಹ ಬರೆದಿಟ್ಟಿದ್ದಾಳೆ. ತನ್ನ ಸಾವಿಗೆ ಪ್ರಿಯಕರ ಅಕ್ಷಿತ್ ಕುಮಾರ್, ಆತನ ತಾಯಿ ಲಕ್ಷ್ಮೀ ಮತ್ತು ಆತನ ಹೊಸ ಗರ್ಲ್ ಫ್ರೆಂಡ್ ಕಾರಣ ಎಂದು ಬರೆದಿಟ್ಟಿದ್ದಾಳೆ.
17 ವರ್ಷದ ಯುವತಿ ಮೇಲೆ 38 ಜನರಿಂದ ನಿರಂತರ ಅತ್ಯಚಾರ : ಕಣ್ಣಲ್ಲಿ ನೀರು ತರಿಸುತ್ತೆ ಈ ಯುವತಿಯ ಕಥೆ..!
ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ರಶ್ಮಿ ಹಾಗೂ ಅಕ್ಷಿತ್ ಕುಮಾರ್ ಎಂಬಾತ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಪ್ರಿಯಕರ ಅವರ ಅಮ್ಮನ ಮಾತಿಗೆ ಕಟ್ಟು ಬಿದ್ದು ಮತ್ತೊಬ್ಬ ಯುವತಿ ಜೊತೆ ಓಡಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








