ಉಗ್ರರಿಂದ ಬಾಂಬ್ ದಾಳಿ: 8 ಮಂದಿ ಭದ್ರತಾ ಸಿಬ್ಬಂದಿ ಬಲಿ
ಅಫ್ಘಾನಿಸ್ತಾನ : ಅಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಬಾಗ್ಲಾನ್ ಪ್ರಾಂತ್ಯದಲ್ಲಿ ತಲಿಬಾನ್ ಉಗ್ರರು ಮತ್ತೆ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ 8 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ತನ್ನ ಗಂಡ ‘ಅವನಲ್ಲ ಅವಳು’ ಎಂದು ಗೊತ್ತಾಯ್ತು…. ಮುಂದೇನಾಯ್ತು..!
ಅಲ್ಲದೆ ಘಟನೆಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇತ್ತ 2 ಸೇನಾ ವಾಹನಗಳು ನಾಶವಾಗಿದ್ದು , ಭದ್ರತಾ ಪಡೆಯ ಮತ್ತಿಬ್ಬರು ಸದಸ್ಯರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಇತ್ತೀಚೆಗೆಷ್ಟೇ ಹೈಕೋರ್ಟ್ ನ ಇಬ್ಬರು ಮಹಿಳಾ ನ್ಯಾಯಾಧೀಶರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಪ್ರಕರಣದ ಬೆನ್ನಲ್ಲೇ ಉಗ್ರರು ದಾಳಿ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








