ಹೆಸರು ಕೆಡಿಸಿಕೊಳ್ಳುವ ಕೆಲಸ ಮಾಡಿಲ್ಲ : ಸಚಿವ ನಾರಾಯಣಗೌಡ
ಬೆಂಗಳೂರು : ಖಾತೆ ಹಂಚಿಕೆ ಬೆನ್ನಲ್ಲೆ ವಲಸೆ ಬಿಜೆಪಿಗರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಒಬ್ಬೊಬ್ಬರಾಗಿಯೇ ಮಾಧ್ಯಮಗಳ ಮುಂದೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.
ಖಾತೆ ಹಂಚಿಕೆ ಆಗುತ್ತಿದ್ದಂತೆ ವಲಸೆ ಬಿಜೆಪಿಗರು ಒಂದು ಸಚಿವ ಡಾ.ಕೆ.ಸುಧಾಕರ್ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ.
ನಾನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಹೆಸರು ಕೆಡಿಸಿಕೊಳ್ಳುವ ಕೆಲಸ ಮಾಡಿಲ್ಲ.
ಖಾತೆ ಬದಲಾವಣೆ ಬಗ್ಗೆ ಸಿಎಂ ಬಳಿ ಮಾತನಾಡುತ್ತೇನೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.
ಸುಧಾಕರ್ ನಿವಾಸದ ಬಳಿ ಮಾತನಾಡಿದ ಅವರು, ನಮ್ಮ ಅಧಿಕಾರಿಗಳು ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ್ದಾರೆ.
ಕೊರೊನಾ ಲಾಕ್ ಡೌನ್ ವೇಳೆ ರೇಷ್ಮೆ ಬೆಳೆಗಾರರ ಸಂಕಷ್ಟದ ಸಮಯದಲ್ಲಿ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡಿ ಕೃಷಿಕರ ನೆರವಿಗೆ ಬಂದಿದ್ದರು.
ತರಕಾರಿ ಬೀದಿ ಪಾಲಾಗುತ್ತಿತ್ತು, ಅದನ್ನು ಉಳಿಸಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಸರಬರಾಜು ಮಾಡಿಸಲು ನೆರವು ನೀಡಿದ್ದರು. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









