ಎಐಎಡಿಎಂಕೆ ಮುಖಂಡೆ ಶಶಿಕಲಾ ನಟರಾಜನ್ ಗೆ ಕೊರೋನಾ ಸೋಂಕು
ಬೆಂಗಳೂರು, ಜನವರಿ21: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಎಐಎಡಿಎಂಕೆ ಮುಖಂಡೆ ವಿ.ಕೆ.ಶಶಿಕಲಾ ಅವರಿಗೆ ಗುರುವಾರ ಕೋವಿಡ್ -19 ಸೋಂಕು ಧೃಡಪಟ್ಟಿದೆ.ಅವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಯ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಗೆ ಜೈಲಿನಿಂದ ಬಿಡುಗಡೆಯಾಗಲು ಕೇವಲ ಒಂದು ವಾರವಿರುವಾಗ ಅನಾರೋಗ್ಯ ಕಾಣಿಸಿಕೊಂಡಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೊರೋನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆಯ ಆಗತ್ಯವಿದ್ದು, ಈಗ ಅವರು ಇನ್ನೂ 10 ದಿನಗಳವರೆಗೆ ಆಸ್ಪತ್ರೆಯಲ್ಲಿ ಇರಬೇಕಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
https://twitter.com/SaakshaTv/status/1351924465622540293?s=19
https://twitter.com/SaakshaTv/status/1351924845550952451?s=19








