ಶಿವಮೊಗ್ಗ ಸ್ಫೋಟ ಪ್ರಕರಣ: ಸಮಗ್ರ ತನಿಖೆಗೆ ರಾಹುಲ್ ಗಾಂಧಿ ಆಗ್ರಹ..!
ಶಿವಮೊಗ್ಗದಲ್ಲಿ ಕಳೆದ ರಾತ್ರಿ ಸಂಭವಿಸಿದ ಕಲ್ಲು ಗಣಿಗಾರಿಕೆ ಸ್ಫೋಟ ಪ್ರಕರಣ ಹಿನ್ನೆಲೆಸಂತಾಪ ಸೂಚಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ರೀತಿಯಾದ ಘಟನೆಗಳ ಬಗ್ಗೆ ಆಳವಾದ ತನಿಖೆ ನಡೆಸಬೇಕು. ಮುಂದಚಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಆಗದಂತೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ನಿನ್ನೆ ರಾತ್ರಿ 10: 30 ರ ಸುಮಾರಿಗೆ ಜಲ್ಲಿ ಮತ್ತು ಬಂಡೆ ಪುಡಿಮಾಡುವ ಗಣಿಗಾರಿಕೆ ಬಳಿ ಭಾರಿ ಸ್ಫೋಟ ಸಂಭವಿಸಿದ್ದು, ಶಿವಮೊಗ್ಗದಲ್ಲಿ ಮಾತ್ರವಲ್ಲದೆ ಪಕ್ಕದ ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ಜನತೆಗೂ ಭಾರೀ ಶಬ್ದದ ಅನುಭವವನ್ನುಂಟುಮಾಡಿತ್ತು. ಜನರು ಭೀತಿಗೊಳಗಾಗಿದ್ದರು. ಸದ್ಯ ಘಟನಾ ಸ್ಥಳಕ್ಕೆ ಮಂಗಳೂರಿನಿಂದ ಶ್ವಾನದಳ ತಂಡ ಬಂದು ಪರಿಶೀಲನೆ ನಡೆಸುತ್ತಿದೆ. ಸ್ಫೋಟದ ತೀವ್ರತೆಗೆ ಲಾರಿಯ ಭಾಗಗಳು ಬಿಡಿಯಾಗಿ ಅಕ್ಕಪಕ್ಕದ ಊರುಗಳಿಗೆ ಹೋಗಿ ಬಿದ್ದಿದೆ. ಮೃತಪಟ್ಟವರ ದೇಹಗಳು ಛಿದ್ರವಾಗಿ ಹೋಗಿ ಗುರುತು ಸಿಗದಂತಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದರು.
ಮಧ್ಯರಾತ್ರಿ 1 ರಿಂದ 3 ಗಂಟೆವರೆಗೆ UPI ಪಾವತಿ ಸಮಸ್ಯೆ..! ಕಾರಣವೇನು..?
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








