ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!
ಗುಜರಾತ್: ವಿದ್ಯಾರ್ಥಿನಿಯ ಮೇಲೆಯೇ ಅತ್ಯಚಾರವೆಸಗಿದ್ದ ಕಾಮುಕ ಶಿಕ್ಷಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 13,000 ರೂ ದಂಡ ವಿಧಿಸಿದೆ. ಗುಜರಾತ್ ನ ವಡೋದರಲ್ಲಿ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ಈ ಶಿಕ್ಷಕ ಉತ್ತಮ ಅಂಕಗಳನ್ನು ನೀಡುವ ಆಮಿಷಯೊಡ್ಡಿ 16 ವರ್ಷದ ವಿದ್ಯಾರ್ಥಿನಿಯನ್ನು ಹೋಟೆಲ್ ಗೆ ಕರೆದೊಯ್ದು ಅತ್ಯಚಾರವೆಸಗಿದ್ದ. ಅಲ್ಲದೇ ಅದನ್ನು ವಿಡಿಯೋ ಮಾಡಿ ಬೆದರಿಸುವ ಮೂಲಕ ಪದೇ ಪದೇ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಒಟ್ಟು 3 ಬಾರಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಈ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಆತನನ್ನು ಬಂಧಿಸಿ ಸಾಕ್ಷ್ಯಗಳನ್ನು ಕೋರ್ಟ್ ಗೆ ಒದಗಿಸಿದ್ದರು. ಇದೀಗ ೀ ಕಾಮುಕನಿಗೆ ಜೀವಾವಧಿ ಶಿಕ್ಷೆಯಾಗಿದೆ.
ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ ಬಾಲಕಿಯ ವಿರುದ್ಧವೇ ಕೇಸ್ ದಾಖಲಿಸಿದ ಪೊಲೀಸರು – ಕಾರಣ..!
ತಂದೆಗೆ ಊಟ ಕೊಡಲು ತೆರಳಿದ್ದ ಬಾಲಕಿ ಮೇಲೆ ಅತ್ಯಚಾರ, ಕೊಲೆ : ಘಟನೆಯಲ್ಲಿ 4 ವರ್ಷದ ಮಗು ಸಾವು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








