ಬೆಂಗಳೂರು : ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1,36,882 ಮಂದಿಗೆ ಕೋವಿಶೀಲ್ಡ್, 1,774 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ.2 ರಿಂದ 3.5 ಜನರಿಗೆ ಸ್ವಲ್ಪ ಅಡ್ಡಪರಿಣಾಮ ಉಂಟಾಗಿದೆ.
8,47,908 ಮಂದಿ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 3,27,201 ಸರ್ಕಾರಿ ಆರೋಗ್ಯ ಸಿಬ್ಬಂದಿ, 4,45,389 ಖಾಸಗಿ ಆರೋಗ್ಯ ಸಿಬ್ಬಂದಿ ಇದ್ದಾರೆ.
ಒಟ್ಟು 7,72,591 ಆರೋಗ್ಯ ಸಿಬ್ಬಂದಿ ಇದ್ದಾರೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು 75,318 ಮಂದಿ ಇದ್ದಾರೆ. ಕೋವ್ಯಾಕ್ಸಿನ್ ನ 1,46,240 ಡೋಸ್ ಇಂದು ಬರಲಿದೆ ಎಂದರು.
ಲಸಿಕೆ ಪಡೆದರೆ ಕೋವಿಡ್ ನಿಂದ ದೂರವಿರಬಹುದು. ಕೆಲ ತಪ್ಪು ಮಾಹಿತಿಗಳಿಂದ ಅಂಜಿಕೆ ಉಂಟಾಗಿದೆ.
2 ನೇ ಹಂತದಲ್ಲಿ ರಾಜ್ಯದ ಒಂದೂವರೆಯಿಂದ ಎರಡು ಕೋಟಿ ಜನರಿಗೆ ಲಸಿಕೆ ನೀಡಬೇಕಾಗುತ್ತದೆ. ಇದು ಬಹುದೊಡ್ಡ ಸವಾಲು ಎಂದರು.
ಗಣಿಗಾರಿಕೆಯಲ್ಲಿ ಜಿಲೆಟಿನ್ ಅಗತ್ಯಕ್ಕಿಂತ ಹೆಚ್ಚು ಬಳಸುವುದು, ಆಳವಾಗಿ ಇಟ್ಟು ಸಿಡಿಸುವುದು ಮೊದಲಾದ ದುರಾಲೋಚನೆಯ ಕೆಲಸ ಮಾಡಲಾಗುತ್ತದೆ. ಇದರಿಂದಾಗಿ ಸಮೀಪದ ಜನರ ಮನೆಗಳಲ್ಲಿ ಬಿರುಕು ಬಿಡುವ ಘಟನೆ ಸಂಭವಿಸುತ್ತಿದೆ. ಗಣಿಗಾರಿಕೆ ಇಲಾಖೆಯ ಅಧಿಕಾರಿಗಳ ಮೂಗಿನ ಕೆಳಗೆಯೇ ಇದು ನಡೆಯುತ್ತಿದೆ. ಪೊಲೀಸರು ಬಹಳ ಎಚ್ಚರದಿಂದ ಇದ್ದು, ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತದೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದರೆ ಬೇಸರವಾಗುತ್ತದೆ ಎಂದರು.
ತುಮಕೂರಿನಲ್ಲಿ ವೈದ್ಯಾಧಿಕಾರಿಗಳು ಮೊದಲೇ ಲಸಿಕೆ ಪಡೆದಿದ್ದಾರೆ. ನಂತರ ಛಾಯಾಚಿತ್ರಕ್ಕಾಗಿ ಕೇಳಿದಾಗ ಲಸಿಕೆ ಪಡೆದಂತೆ ಮಾಡಲಾಗಿದೆ. ಇದರಲ್ಲಿ ಲೋಪವಿಲ್ಲ ಎಂದು ಸ್ಪಷ್ಟಪಡಿಸಿದರು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









